
ಬೆಂಗಳೂರು, ಜು.೪: ಕೆ.ಆರ್.ವೃತ್ತದಲ್ಲಿ ನಡೆದ ಬಿಎಂಟಿಸಿ ಬಸ್ ಗಳ ನಡುವಿನ ಅಪಘಾತದಲ್ಲಿ ಗಾಯಗೊಂಡು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಾಗಿರುವ ಚಾಲಕ ಮತ್ತು ಪ್ರಯಾಣಿಕರನ್ನು ಸಾರಿಗೆ ಸಚಿವ ಬೈರತಿ ಸುರೇಶ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.ಬಳಿಕ ವೈದ್ಯರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ.
ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವರು, ಅಪಘಾತದ ಬಗ್ಗೆ ಮಾಹಿತಿ ಪಡೆದ ಅವರು, ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಅಗತ್ಯ ಬಿದ್ದರೆ ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.
.ಎರಡೂ ಎಲೆಕ್ಟ್ರಿಕ್ ಬಸ್ ಗಳ ನಡುವೆ ಈ ಅಪಘಾತ ಸಂಭವಿಸಿದೆ.ಯಾವ ಕಾರಣಕ್ಕೆ ಈ ಘಟನೆ ನಡೆದಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಈ ಎಲೆಕ್ಟ್ರಿಕ್ ಬಸ್ ಗಳನ್ನು ತೆಗೆದುಕೊಳ್ಳುವ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಗಂಭೀರವಾಗಿ ಅಧ್ಯಯನ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ.ಜೊತೆಗೆ ಇನ್ನು ಮುಂದೆ ಚಾಲಕರು ಬಸ್ ಚಾಲನೆಯನ್ನು ಜಾಗರೂಕತೆಯಿಂದ ಮಾಡಬೇಕೆಂದು ಅವರು ನಿರ್ದೇಶನ ನೀಡಿದರು
ಇನ್ನು ಕೆ.ಆರ್ ಸರ್ಕಲ್ನಲ್ಲಿ ಬೆಳಗ್ಗೆ ಎರಡು ಇವಿ ಬಿಎಂಟಿಸಿ ನಡುವೆ ಅಪಘಾತ ಸಂಭವಿಸಿದೆ. ಅವಘಡದಲ್ಲಿ ೧೩ ಜನ ಗಾಯಗೊಂಡಿದ್ದು,ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವರ ದಯೆಯಿಂದ ಕೆಲವರು ಡಿಸ್ಚಾರ್ಜ್ ಆಗ್ತಿದ್ದಾರೆ.ಮೂವರಿಗೆ ಎಂಆರ್ಐ, ಸಿಟಿ ಸ್ಕ್ಯಾನ್ ಮಾಡಿದ್ದಾರೆ.
ಒಂದು ಬಸ್ ಸಿಗ್ನಲ್ನಲ್ಲಿ ನಿಂತಿತ್ತು.ಈ ವೇಳೆ ಮತ್ತೊಂದು ಬಸ್ ಹಿಂದಿನಿಂದ ಬಂದು ಗುದ್ದಿದೆ. ನಮ್ಮ ಸಿಬ್ಬಂದಿ ಗಾಯಾಳುಗಳನ್ನು ಕರೆತಂದು ಅಡ್ಮಿಟ್ ಮಾಡಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರದಿಂದ ಭರಿಸುತ್ತೇವೆ. ಜೊತೆಗೆ ಚಾಲಕ ವೇಗದ ಚಾಲನೆ ಮಾಡಿದ್ರಾ ಅಂತ ಪರಿಶೀಲನೆ ಮಾಡ್ತೇವೆ.ಇವಿ ಬಸ್ಗಳ ಅಪಘಾತ ಹೆಚ್ಚಾಗುತ್ತಿವೆ.ಇದರ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.




























