
ಕಲಬುರಗಿ:ಮಾ.3:ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಿಂದಲೇ ಗುಣಮಟ್ಟದ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡಿದರೆ, ಅವರು ಬಯಸಿದ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸುವರ್ಣಾ ಭಗವತಿ ಹೇಳಿದರು.
ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳ ಫಲಿತಾಂಶ ಪ್ರಕಟಣೆಯ ಭಾಗವಾಗಿ ಪದವಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಂಸ್ಥೆಯ ಅಧಕ್ಷೆ ಸುವರ್ಣ ಭಗವತಿ ಕಾರ್ಯಕ್ರಮ ಉದ್ಘಾಟಿಸಿ, ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಶಿಕ್ಷೆಯಿಂದ ಮಕ್ಕಳನ್ನು ಸುಧಾರಿಸಲು ಸಾಧ್ಯವಿಲ್ಲ, ಬದಲಾಗಿ ಇಂತಹ ಕಾರ್ಯಕ್ರಮಗಳ ಮೂಲಕ ಪೆÇ್ರೀತ್ಸಾಹಿಸಬೇಕು. ಮಕ್ಕಳ ಮನಸ್ಸು ಹದವಾದ ಮಣ್ಣಿನಂತಿರುತ್ತದೆ. ಈ ಮಣ್ಣಿನಲ್ಲಿ ನಾವು ಎಂತಹ ಬೀಜ ಬಿತ್ತುತ್ತೇವೋ ಅದೇ ರೀತಿಯ ಬೆಳೆಯ ಇಳುವರಿ ಪಡೆಯಬಹುದಾಗಿದೆ. ಹಾಗಾಗಿ ಕುಟುಂಬದ ಹಂತದಲ್ಲಿ ಪೆÇೀಷಕರು ಹಾಗೂ ಶಾಲಾ ಹಂತದಲ್ಲಿ ಶಿಕ್ಷಕರು ತಮ್ಮ ಹೊಣೆಗಾರಿಕೆ ಅರಿತು ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕಿದೆ ಎಂದು ಕಿವಿಮಾತು ಹೇಳಿದರು.
ಶಾಲೆಯ ಮುಖ್ಯಗುರು ಅಂಬಿಕಾರೆಡ್ಡಿಮಾತನಾಡಿ, ದೊಡ್ಡವರ ಮಾತುಗಳನ್ನು ಮಕ್ಕಳು ಹೆಚ್ಚು ಆಸಕ್ತಿಯಿಂದ ಆಲಿಸದೆ ಹೋದರೂ, ದೊಡ್ಡವರು ಏನು ಮಾಡುತ್ತಿದ್ದಾರೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಹಾಗಾಗಿ ಹಿರಿಯರು ಎನಿಸಿಕೊಂಡವರ ವರ್ತನೆ ಯಾವತ್ತೂ ಅತ್ಯಂತ ಜವಾಬ್ದಾರಿಯುತವಾಗಿರಬೇಕು. ಆ ನಿಟ್ಟಿನಲ್ಲಿ ಮಕ್ಕಳನ್ನು ಹುರಿದುಂಬಿಸಲು ಪದವಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಉದ್ದೇಶ ಕುರಿತು ವಿವರಿಸಿದರು.



























