
ಯಾದಗಿರಿ:ಮೇ.೨೬: ಜಿಲ್ಲೆಯ ಆಡಳಿತ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಐಎಎಸ್ ಅಧಿಕಾರಿ ಪಾಂಡ್ವೆ ರಾಹುಲ್ ತುಕರಾಮ್ ಅವರಿಗೆ ಗಣ್ಯರಿಂದ ಆತ್ಮೀಯ ಅಭಿನಂದನೆಗಳು ಮತ್ತು ಗೌರವ ಸನ್ಮಾನಗಳ ಮಹಾಪೂರವೇ ಹರಿದು ಬರುತ್ತಿದೆ.
ಈ ಹಿನ್ನೆಲೆuಟಿಜeಜಿiಟಿeಜಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ತಾಯಮ್ಮ ಶ್ರೀಕಾಂತ್ ಅನವಾರ್ ದೋರನಹಳ್ಳಿ ಅವರು ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ ಸನ್ಮಾನಿಸಿ ಶುಭಾಶಯ ಕೋರಿದರು. ಜಿಲ್ಲೆಯ ಆಡಳಿತ ವ್ಯವಸ್ಥೆಗೆ ಜನಸ್ನೇಹಿ ಸ್ಪಂದನೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.
ಸನ್ಮಾನ ಕಾರ್ಯಕ್ರಮದ ಬಳಿಕ ನಡೆದ ಮಹತ್ವದ ಚರ್ಚೆಯಲ್ಲಿ ದೋರನಹಳ್ಳಿ ಭಾಗ ಸೇರಿದಂತೆ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯಗಳ ಅಭಿವೃದ್ಧಿ, ಕುಡಿಯುವ ನೀರಿನ ಸಮಸ್ಯೆ, ರಸ್ತೆ ಕಾಮಗಾರಿಗಳ ವೇಗವರ್ಧನೆ, ಸಾರ್ವಜನಿಕ ಸೇವೆಗಳ ಸುಧಾರಣೆ ಹಾಗೂ ಜನರ ದಿನನಿತ್ಯದ ಸಮಸ್ಯೆಗಳ ಕುರಿತು ಸವಿಸ್ತಾರವಾಗಿ ಗಮನ ಸೆಳೆಯಲಾಯಿತು. ವಿಶೇಷವಾಗಿ ಹಿಂದುಳಿದ ಪ್ರದೇಶಗಳಿಗೆ ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾಧಿಕಾರಿ ಪಾಂಡ್ವೆ ರಾಹುಲ್ ತುಕರಾಮ್ ಅವರು ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಮತ್ತು ಪಾರದರ್ಶಕ ಆಡಳಿತ ನೀಡುವ ಭರವಸೆ ವ್ಯಕ್ತಪಡಿಸಿದ್ದು, ಸಾರ್ವಜನಿಕರ ಹಿತಾಸಕ್ತಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮವು ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು.

























