Home ಜಿಲ್ಲೆ ಯಾದಗಿರಿಯಲ್ಲಿ ದಹಿ ಹಂಡಿ ಉತ್ಸವಕ್ಕೆ ಅದ್ದೂರಿ ಚಾಲನೆ

ಯಾದಗಿರಿಯಲ್ಲಿ ದಹಿ ಹಂಡಿ ಉತ್ಸವಕ್ಕೆ ಅದ್ದೂರಿ ಚಾಲನೆ

ಯಾದಗಿರಿ: ಪ್ರತಿ ವರ್ಷ ನಗರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ದಹಿ ಹಂಡಿ ಉತ್ಸವವನ್ನು ಆಯೋಜಿಸುವ ಮೂಲಕ ಭಾರತೀಯ ಸಂಸ್ಕೃತಿ ಹಾಗೂ ಧರ್ಮಾಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು.

ನಗರದ ಗಾಂಧಿ ಚೌಕ್‌ನಲ್ಲಿ ಗಿರಿನಾಡು ಗೆಳೆಯರ ಬಳಗದ ವತಿಯಿಂದ ಶನಿವಾರ ರಾತ್ರಿ ಆಯೋಜಿಸಿದ್ದ ದಹಿ ಹಂಡಿ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶ್ರೀಕೃಷ್ಣ ಪರಮಾತ್ಮನು ಜಗತ್ತಿನ ಉದ್ಧಾರಕ್ಕಾಗಿ ಅವತರಿಸಿದ ಮಹಾನ್ ಚೇತನ. ಅವರ ಜೀವನ ಸಂದೇಶಗಳು ಇಂದಿನ ಯುವಜನತೆಗೆ ದಾರಿದೀಪವಾಗಿವೆ. ಇಂತಹ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳ ಮೂಲಕ ನಮ್ಮ ಪರಂಪರೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ ನಡೆಯಬೇಕು ಎಂದು ಹೇಳಿದರು.

ಉತ್ಸವದ ಅಂಗವಾಗಿ ಗಾಂಧಿ ಚೌಕ್‌ನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಸಾರ್ವಜನಿಕರು ಹಾಗೂ ಯುವಕರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಶಶಾಂಕ್ ನಾಲ್ವಡಗಿ, ಮುಖಂಡರಾದ ತಾಯಪ್ಪ ಯಾದವ್, ಮಹೇಶ ಅನಪುರ, ಪದಾಧಿಕಾರಿಗಳಾದ ದೊಡ್ಡಪ್ಪ ಚಂಡಕ್ರಿ, ಬಸವಪ್ರಭು, ದೇವು ಶೆಟ್ಟಿ, ಸಚಿನ್ ರಾಜು, ನಾಗರಾಜ, ರಾಘವೇಂದ್ರ, ರಮೇಶ್, ಗೌತಮ್, ಸಾಬರೆಡ್ಡಿ, ಜಗಣ್ಣ, ಸಾಬರೆಡ್ಡಿ ನಾಯ್ಕಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು