Home ಜಿಲ್ಲೆ ಯಾದಗಿರಿಯಲ್ಲಿ ಉದ್ಯೋಗಾರ್ಥಿಗಳಿಗೆ ಭರ್ಜರಿ ಅವಕಾಶ: ಏ. ೫ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ

ಯಾದಗಿರಿಯಲ್ಲಿ ಉದ್ಯೋಗಾರ್ಥಿಗಳಿಗೆ ಭರ್ಜರಿ ಅವಕಾಶ: ಏ. ೫ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ

ಯಾದಗಿರಿ: ಮಾ.೩೦:ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳ ದಾರಿ ತೆರೆಯುವ ಉದ್ದೇಶದಿಂದ ಡಾ. ಭೀಮಣ್ಣ ಮೇಟಿ ಫೌಂಡೇಶನ್ ಮತ್ತು ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಗಳು ಸಂಯುಕ್ತವಾಗಿ ಏಪ್ರಿಲ್ ೫ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿವೆ.

ನಗರದ ಚಿತ್ತಾಪುರ ರಸ್ತೆಯಲ್ಲಿರುವ ಡಿಡಿಯು ಸಿಬಿಎಸ್‌ಇ ಶಾಲಾ ಆವರಣದಲ್ಲಿ ಬೆಳಿಗ್ಗೆ ೯ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ನಡೆಯಲಿರುವ ಈ ಮೇಳದಲ್ಲಿ ನೂರಾರು ಉದ್ಯೋಗಾವಕಾಶಗಳು ಲಭ್ಯವಿರುವುದಾಗಿ ಸಂಸ್ಥೆ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೇಟಿ ತಿಳಿಸಿದ್ದಾರೆ.

ಶಿಕ್ಷಣ ಕ್ಷೇತ್ರದ ವಿವಿಧ ಹುದ್ದೆಗಳಾದ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ಸಹ ಶಿಕ್ಷಕರು ಸೇರಿದಂತೆ ಆಡಳಿತ ಸಿಬ್ಬಂದಿ, ವಾರ್ಡನ್, ಕಚೇರಿ ಸಿಬ್ಬಂದಿ, ಚಾಲಕರು ಮತ್ತು ಭದ್ರತಾ ಸಿಬ್ಬಂದಿಗೆ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಶಾಲೆಗಳು ಮತ್ತು ಕಾಲೇಜುಗಳ ಪ್ರತಿನಿಧಿಗಳು ನೇರವಾಗಿ ಭಾಗವಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಶೈಕ್ಷಣಿಕ ಅರ್ಹತೆ ಹೊಂದಿರುವ ಆ.ಇಜ, ಃ.ಇಜ, ಒ.ಇಜ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರು ಮಾತ್ರವಲ್ಲದೆ PUಅ ಹಾಗೂ SSಐಅ ಉತ್ತೀರ್ಣರಾದವರಿಗೂ ಉದ್ಯೋಗಾವಕಾಶ ಕಲ್ಪಿಸಿರುವುದು ಈ ಮೇಳದ ವಿಶೇಷವಾಗಿದೆ. ಹೊಸದಾಗಿ ವಿದ್ಯಾಭ್ಯಾಸ ಮುಗಿಸಿದ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಉದ್ಯೋಗಕ್ಕೆ ಸಜ್ಜುಗೊಳಿಸುವ ವ್ಯವಸ್ಥೆಯೂ ಮಾಡಲಾಗಿದೆ.

ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ನೋಂದಣಿ ಶುಲ್ಕವಿಲ್ಲ. ತಮ್ಮ ಎಲ್ಲಾ ಮೂಲ ದಾಖಲೆಗಳು ಮತ್ತು ಪ್ರತಿಗಳೊಂದಿಗೆ ಹಾಜರಾಗುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಿಂದ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಯೋಜಕರು ಕರೆ ನೀಡಿದ್ದಾರೆ. ಈ ಉದ್ಯೋಗ ಮೇಳವು ಸ್ಥಳೀಯ ಯುವಕರಿಗೆ ಹೊಸ ಭವಿಷ್ಯ ನಿರ್ಮಾಣಕ್ಕೆ ವೇದಿಕೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.