ಬೆಂಗಳೂರು, ಆ. ೧೧- ಈ ವರ್ಷ ಗ್ರೇಟರ್ ಪ್ರಾಧಿಕಾರ ಸ್ಥಾಪನೆಯಿಲ್ಲ ಎಂದು ಹೈಕೋರ್ಟ್‌ಗೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ತಿಳಿಸಿದರು. ಬಿಬಿಎಂಪಿಯನ್ನು ೫ ಪಾಲಿಕೆಗಳಾಗಿ ವಿಭಜಿಸಲಾಗುತ್ತಿದೆ. ಈ ೫ ಪಾಲಿಕೆಗಳಲ್ಲಿ ಮುಂದಿನ ವರ್ಷ ಜನವರಿ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿವೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿ ಮುಂದೂಡಲಾಗಿದೆ ಎಂದು ಅವರು ಹೈಕೋರ್ಟ್‌ಗೆ ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿ ಮಾಡುವುದು ಯಾವಾಗ ಎಂದು ಹೈಕೋರ್ಟ್ ಪ್ರಶ್ನಿಸಿತ್ತು. ಬಿಬಿಎಂಪಿ ಕಟ್ಟಡ ಬೈಲಾಉಲ್ಲಂಘನೆ ವಿಚಾರಣೆ ವೇಳೆ ಹೈಕೋರ್ಟ್ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಎಜಿ ಶಶಿಕಿರಣ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆಯನ್ನು ೫ ಪಾಲಿಕೆ ವಿಭಜಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಿರ್ಮಾಣಕ್ಕೆ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು.


























