Home ಜಿಲ್ಲೆ ವರನಟ ಡಾ.ರಾಜ್‍ಕುಮಾರ್ ಜನ್ಮದಿನಾಚರಣೆ

ವರನಟ ಡಾ.ರಾಜ್‍ಕುಮಾರ್ ಜನ್ಮದಿನಾಚರಣೆ

ಗದಗ, ಏ22: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಏಪ್ರಿಲ್ 24 ರಂದು ಬೆಳಿಗ್ಗೆ 11 ಗಂಟೆಗೆ ವರನಟ ಡಾ.ರಾಜ್‍ಕುಮಾರ್ ಜನ್ಮದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಉಪಸ್ಥಿತಿ ವಹಿಸುವರು.

ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಹಾಗೂ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ , ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಹಾವೇರಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ನರಗುಂದ ಶಾಸಕ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಯೋಜನೆ ಕಾರ್ಯಕ್ರಮಗಳು, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಶ್ರೀಮತಿ ಜಾನಕಿ ಕೆ.ಎಂ, ಆಗಮಿಸಲಿದ್ದಾರೆ.

ಅಖಿಲ ಕರ್ನಾಟಕ ಡಾ.ರಾಜಕುಮಾರ ಅಭಿಮಾನಿಗಳ ಸಂಘಗಳ ಒಕ್ಕೂಟದ ಗೌರವಾಧ್ಯಕ್ಷ ಬಸವರಾಜ ಮನಗುಂಡಿ ಉಪನ್ಯಾಸ ನೀಡಲಿದ್ದಾರೆ. ಕಲಾವಿದ ಗೌಡಪ್ಪ ಬೊಮ್ಮಪ್ಪನವರ ಮತ್ತು ಕಲಾ ತಂಡದವರಿಂದ ಡಾ.ರಾಜಕುಮಾರ್ ಚಿತ್ರಗೀತೆಗಳ ಗಾಯನ ಜರುಗಲಿದೆ.

ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೆÇಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬಿ ಮಡ್ಲೂರ ಸರ್ವರಿಗೂ ಸ್ವಾಗತ ಕೋರಿದ್ದಾರೆ.