
ವಿಜಯಪುರ, ಅ. 15: ನಗರದ ಗಾಂಧಿಚೌಕ್ ಪೆÇಲೀಸ್ ಠಾಣೆ ವ್ಯಾಪ್ತಿಯ ಮೀನಾಕ್ಷಿ ಚೌಕದ ಬಳಿ ಬುಧವಾರ ಬೆಳಗ್ಗೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ.
ಮೃತನನ್ನು ಅಲ್ತಾಫ್ ಮನಗೂಳಿ (25) ಎಂದು ಗುರುತಿಸಲಾಗಿದೆ.
ದುಷ್ಕರ್ಮಿಗಳು ಹರಿತ ಆಯುಧದಿಂದ ಮನ ಬಂದಂತೆ ಇರಿದು ಕಲ್ಲಿನಿಂದ ಜಜ್ಜಿ ಅಮಾನುಷವಾಗಿ ಭೀಕರ ಹತ್ಯೆ ಮಾಡಿ ಪರಾರಿಯಾಗಿದ್ದರು.
ಪೆÇಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಒಂದೇ ದಿನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ವಿಜಯಪುರದ ಅಲ್ ಅಮೀನ ಬಿಸ್ಮಿಲ್ಲಾ ಕಾಲನಿಯ ನಿವಾಸಿ ಮುರ್ತುಜಖಾದ್ರಿ ಯಾಳವಾರ ಹಾಗೂ ತಾಜಬಾವಡಿ ಖಾಜಾನಗರದ ಮೋಯಿನ್ ಸಂಖ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಅಲ್ತಾಫ್ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಗಾಂಧಿಚೌಕ್ ಪೆÇಲೀಸ್ ಠಾಣೆಯ ಎಂ.ಒ.ಬಿ. (ಮೋಡಸ್ ಆಪರಾಂಡಿ ಬ್ಯೂರೋ) ದಾಖಲೆಯಲ್ಲಿ ಆತನ ಹೆಸರು ಇತ್ತು ಎಂದು ಪೆÇಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಾಂಧಿಚೌಕ್ ಠಾಣೆಯ ಸಿಪಿಐ ಹಾಗೂ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆರೋಪಿಗಳ ಪತ್ತೆಗೆ ಪೆÇಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದ ಹೆಚ್ಚಿನ ವಿವರಗಳು ತನಿಖೆಯ ಬಳಿಕ ಬಹಿರಂಗವಾಗಲಿವೆ.























