Home ಜಿಲ್ಲೆ ಬೆಂಗಳೂರು ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ

filter: 0; fileterIntensity: 0.000000; filterMask: 0; captureOrientation: 0; hdrForward: 6; shaking: 0.039104; highlight: 0; algolist: 0; multi-frame: 1; brp_mask: 8; brp_del_th: 0.0000,0.0000; brp_del_sen: 0.0000,0.0000; delta:1; bokeh:1; ispap:1; papproctime: 2026:08:23 12:50:58; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;zeissColor: bright;

ಕೋಲಾರ,ಆ,೨೪- ತಾಲೂಕಿನ ಅಮ್ಮನಲ್ಲೂರು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ವಿವಿಧ ಸಮುದಾಯಗಳ ಮುಖಂಡರು ಪಕ್ಷಾತೀತವಾಗಿ ಒಗ್ಗೂಡಿ ಗುದ್ದಲಿಪೂಜೆ ನೆರವೇರಿಸಿದರು.


ಶಾಸಕ ಕೊತ್ತೂರು ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಅವರ ಖಾತೆಯಿಂದ ೧೦ ಲಕ್ಷ ಅನುದಾನದ ಜೊತೆಗೆ ದಾನಿಗಳ ಸಹಕಾರದಿಂದ ಪುತ್ಥಳಿ ನಿರ್ಮಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಕ್ಯಾಲನೂರು ಸೊಸೈಟಿ ಅಧ್ಯಕ್ಷ ಹಾಗೂ ಗ್ರಾಮದ ಹಿರಿಯ ಮುಖಂಡ ವೆಂಕಟರೆಡ್ಡಿ ಮಾತನಾಡಿ, ಎಲ್ಲ ಸಮುದಾಯಗಳ ಮುಖಂಡರು ಪಕ್ಷಾತೀತವಾಗಿ ಒಂದಾಗಿ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿರುವುದು ಸಂತಸ ತಂದಿದೆ ಗ್ರಾಮಗಳಲ್ಲಿ ಸಣ್ಣಪುಟ್ಟ ವೈಮನಸ್ಯಗಳು ಸಹಜ. ಅವುಗಳನ್ನು ಗ್ರಾಮದಲ್ಲಿಯೇ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಪೊಲೀಸ್ ಠಾಣೆಯ ಮೆಟ್ಟಿಲೇರುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದರು.


ಜಾತಿ-ಭೇದ ಮರೆತು ಶೀಘ್ರವಾಗಿ ಪುತ್ಥಳಿ ನಿರ್ಮಾಣವಾಗಬೇಕು. ಎಲ್ಲ ಸಮುದಾಯಗಳ ಸಹಕಾರದಿಂದ ಗ್ರಾಮದಲ್ಲಿ ಅನ್ಯನ್ಯತೆ ಬೆಳೆಸಿಕೊಂಡು ರಾಜ್ಯಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಗ್ರಾಮದ ಯುವಕರು ಸೇರಿದಂತೆ ಎಲ್ಲಾ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು


ದಮನಿತರ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಮೇಡಿಹಾಳ ಮುನಿಆಂಜಿನಪ್ಪ ಮಾತನಾಡಿ, ಅಂಬೇಡ್ಕರ್ ಅವರ ಪುತ್ಥಳಿ ಹಾಗೂ ಭಾವಚಿತ್ರದ ವಿಚಾರದಲ್ಲಿ ಕೆಲವೆಡೆ ಗಲಾಟೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಅಮ್ಮನಲ್ಲೂರು ಗ್ರಾಮದಲ್ಲಿ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟು ಪ್ರದರ್ಶಿಸಿರುವುದು ಜಿಲ್ಲೆ ಮತ್ತು ರಾಜ್ಯಕ್ಕೆ ಮಾದರಿಯ ಗ್ರಾಮವಾಗಿದೆ ಒಂದೇ ಸ್ಥಳದಲ್ಲಿ ಅಂಬೇಡ್ಕರ್, ಕೆಂಪೇಗೌಡರು, ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಪುತ್ಥಳಿಗಳನ್ನು ನಿರ್ಮಿಸುವ ಮೂಲಕ ಸೌಹಾರ್ದತೆಯ ಸಂದೇಶ ಸಾರಲಾಗಿದೆ. ಇದು ಅಂಬೇಡ್ಕರ್ ಅವರ ಸಮಾನತೆ ಹಾಗೂ ಸಹಬಾಳ್ವೆಯ ಆಶಯಕ್ಕೆ ಪೂರಕವಾಗಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಮುಖಂಡರಾದ ನಾಗೇಶ್, ಪ್ರಸನ್ನ, ಮಹೇಶ್, ಅಂಬರೀಶ್, ಕೃಷ್ಣಪ್ಪ, ಶಿವಕುಮಾರ್, ಭರಪ್ಪ, ಮುನಿಯಪ್ಪ, ರಾಮಪುರ ಮುನಿರಾಜ್, ದೇವರಾಜ್, ಶ್ರೀನಿವಾಸ್, ಮಂಜುನಾಥ್, ಗೋಪಾಲ್, ರಾಮ ಕೃಷ್ಣಪ್ಪ, ಕೈವಾರ ಮಂಜಣ್ಣ, ರವಿ ಸೇರಿದಂತೆ ಗ್ರಾಮದ ಎಲ್ಲಾ ಸಮು ದಾಯದ ಮುಖಂಡರುಗಳು ಭಾಗಿಯಾಗಿದ್ದರು