ಕಲಬುರಗಿ,ಡಿ.03:ಕಲ್ಯಾಣ ಕರ್ನಾಟಕ ಭಾಗದ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪ್ರಗತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಸೇವೆ ಅಮೂಲ್ಯವಾಗಿದ್ದು, ಈ ವಿಶ್ವವಿದ್ಯಾಲಯದಲ್ಲಿ ಅಭ್ಯಾಸ ಮಾಡಿದ ಬಹಳಷ್ಟು ವಿದ್ಯಾರ್ಥಿಗಳು ಪ್ರತಿಯೊಂದು ರಂಗದಲ್ಲಿ ಉನ್ನತ ಸಾಧನೆಯನ್ನು ಮಾಡಿದ್ದಾರೆ ಎಂದು ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಧ್ಯಕ್ಷರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪೆÇ್ರ. ಎ. ಹೆಚ್. ರಾಜಾಸಾಬ್ ಅವರು ಹೇಳಿದರು.
ಮಂಗಳವಾರದಂದು ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಕಲಬರುಗಿ 46 ನೆಯ ಸಂಸ್ಥಾಪನಾ ದಿನಾಚರಣೆ ಹಾಗೂ 2025-26 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಉದ್ಫಾಟಿಸಿ ಮಾತನಾಡಿದರು.
ಈಗ ಪ್ರತಿ ಜಿಲ್ಲೆಗೊಂದು ವಿಶ್ವವಿದ್ಯಾಲಯ ಸ್ಥಾಪನೆ ಕಾರಣ ಗುಲಬರ್ಗಾ ವಿಶ್ವವಿದ್ಯಾಲಯ ತೀವ್ರ ಅನುದಾನ ಕೊರತೆ ಮತ್ತು ಸಮಯಕ್ಕೆ ಸರಿಯಾಗಿ ನೇಮಕಾತಿಗಳು ಇಲ್ಲದ ಕಾರಣ ಶಿಕ್ಷಣದಲ್ಲಿ ಹಿನ್ನಡೆ ಕಾರಣವಾಗುತ್ತಿದೆ. ಸರ್ಕಾರ ವಿಶ್ವವಿದ್ಯಾಲಯಗಳಿಗೆ ಸಮರ್ಪಕ ಅನುದಾನ ಬಿಡುಗಡೆ ಮಾಡಿ ಪ್ರತಿಯೊಬ್ಬರು ಉನ್ನತ ಶಿಕ್ಷಣ ಕನಸನ್ನು ಸಕರಾಗೊಳಿಸಲು ಹೆಚ್ಚಿನ ಮುತುವರ್ಜಿ ವಹಿಸಿ ಸಮರ್ಪಕ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಹೇಳಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪೂರಕವಾಗುವಂತೆ ಸುಸ್ಥಿರ ಅಭಿವೃದ್ಧಿ ನಾವಿನ್ಯತೆ ಸಂಶೋಧನೆ ಕುರಿತು ಪ್ರಾಧ್ಯಾಕಪಕರುಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಮಾರ್ಗದರ್ಶನ ನೀಡಬೇಕು. ಕಲ್ಯಾಣ ಕರ್ನಾಟಕ ಭಾಗವು ಶೈಕ್ಷಣಿಕವಾಗಿ ಹಿಂದುಳಿದ ಹಣಿಪಟ್ಟಿ ಇದ್ದರೂ ಕೂಡ ಸಂಗೀತ, ಕಲೆ, ಸಂಸ್ಕøತಿ ಮತ್ತು ಸಂಪ್ರಾದಯಗಳು ಮತ್ತು ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಾನ ವ್ಯಕಿಗಳು ಈ ಭಾಗದವರಾಗಿದ್ದಾರೆ ಎಂದರು.
ಕಲಬುರಗಿಯ ಆರ್.ಜಿ.ಹೆಚ್.ಯು.ಎಸ್. ಪ್ರಾಧ್ಯಾಪಕರು ಹಾಗೂ ಕೆ.ಬಿ.ಎನ್. ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾದ ನಾಡೋಜ ಡಾ. ಪಿ.ಎಸ್. ಶಂಕರ್ ಅವರು ಮಾತನಾಡಿ, ಗುಲಬರ್ಗಾ ವಿಶ್ವವಿದ್ಯಾಲಯ ಮೊದಲು ಹತ್ತು ವರ್ಷ ಪಿ.ಜಿ ಕೇಂದ್ರಗಳಾದ ಕನ್ನಡ, ಇಂಗ್ಲೀಷ ಅಧ್ಯಯನ ಕೇಂದ್ರಗಳಾಗಿ ಸ್ಥಾಪನೆಯಾದ ವಿಶ್ವವಿದ್ಯಾಲಯ ಇಂದು ಹೆಮ್ಮರವಾಗಿ ಬೆಳೆದು ಈ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಕನಸನ್ನು ಸಕಾರಗೊಳಿಸುವುದರ ಜತೆಗೆ ಇಲ್ಲಿಯ ವಿದ್ಯಾಭ್ಯಾಸ ಮಾಡಿದ ಬಹಳಷ್ಟು ವಿದ್ಯಾರ್ಥಿಗಳು ಹೆಚ್ಚಿನ ಸಾಧನೆಯನ್ನು ಮಾಡಿದ್ದಾರೆ ಗುಲಬರ್ಗಾ ವಿಶ್ವವಿದ್ಯಾಲಯ ಕ್ಯಾಂಪಸ್ ಹಚ್ಚು ಹಸಿರಾಗಿರಲು ಕಾರಣೀಕತರಾದ ಸಸ್ಯಶಾಸ್ತ್ರದ ಉಪನ್ಯಾಸಕರಾದ ಕ್ಯಾಂಪಸ್ ಉದ್ಯಾನ ವನಕ್ಕೆ ನಾಗರಾಜ ಅವರ ಹೆಸರನ್ನು ಇಡಬೇಕೆಂದು ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಶಶಿಕಾಂತ ಎಸ್. ಉಡಕೇರಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕುಲಸಚಿವ ಪ್ರೊ.ರಮೇಶ ಲಂಡನಕರ್ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.
ಜೈವಿಕ ತಂತ್ರಜ್ಞಾನ ವಿಭಾಗದ ಪೆÇ್ರ. ಎಂ. ಬಿ. ಸುಲೋಚನಾ ಹಾಗೂ ವಿಶ್ವವಿದ್ಯಾಲಯ ಗ್ರಂಥಪಾಲಕ ಡಾ. ಸುರೇಶ್ ಜಂಗೆ ಅತಿಥಿ ಪರಿಚಯಿಸಿದರು. ಇಂಗ್ಲಿμï ವಿಭಾಗದ ಪ್ರಾಧ್ಯಾಪಕ ಪೆÇ್ರ. ರಮೇಶ್ ರಾಥೋಡ್ ವರದಿ ಮಂಡಿಸಿದರು.
ಅಂತರಾಷ್ಟ್ರೀಯ ಮತ್ತು ವಿದೇಶದಲ್ಲಿ ಪ್ರಬಂಧ ಮಂಡಿಸಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ.ಎಚ್.ಟಿ.ಪೋತೆ, ಗಣಿತ ಶಾಸ್ತ್ರ ವಿಭಾಗದ ಪ್ರೊ. ಶ್ರವಣ ಕುಮಾರ ಗಾಯಕವಾಡ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಎನ್.ಜಿ. ಕಣ್ಣೂರ, ವಿಶ್ವವಿದ್ಯಾಲಯ ಗ್ರಂಥಪಾಲಕ ಸುರೇಶ ಜಂಗೆ, ದೈಹಿಕ ಶಿಕ್ಷಣ ಪ್ರಾಂಶುಪಾಲರಾದ ಡಾ. ಹನುಮಂತ ಜಂಗೆ ಯೋಗ ವಿಭಾಗದ ಡಾ. ಚಂದ್ರಕಾಂತ ಬಿರಾದಾರ , ಅನ್ವಯಕ ವಿದ್ಯುನ್ಮಾನ ವಿಭಾಗದ ಪ್ರೊ. ಡಾ. ಅಂಬರೀಷ ಅಂಬಲಗಿ, ಸೇರಿದಂತೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಿವೃತ್ತಿ ಹೊಂದಿದ ಬೋಧಕೇತರ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು.
ಸಂಗೀತ ವಿಭಾಗದ ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ನಾಡಗೀತೆ ಹಾಗೂ ವಿಶ್ವವಿದ್ಯಾಲಯ ಗೀತೆ ಪ್ರಸ್ತುತಪಡಿಸಿದರು. ಇಂಗ್ಲಿμï ವಿಭಾಗದ ಪ್ರಾಧ್ಯಾಪಕ ಪೆÇ್ರ. ರಮೇಶ್ ರಾಥೋಡ್, ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪೆÇ್ರ. ಅಬ್ದುಲ್ ರಬ್ ಉಸ್ತಾದ್, ವಿದ್ಯಾವಿಷಯಕ ಪರಿಷತ್ ಸದಸ್ಯ ಪೆÇ್ರ. ಬಸವರಾಜ ಸಣ್ಣಕ್ಕಿ, ಮೌಲ್ಯಮಾಪನ ಕುಲಸಚಿವ ಡಾ. ಎನ್.ಜಿ. ಕಣ್ಣೂರ, ವಿ ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರು, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು, ಅತಿಥಿ ಉಪನ್ಯಾಸಕರು, ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

























