Home ಜಿಲ್ಲೆ ಕಲಬುರಗಿ ನಿಷ್ಪಕ್ಷಪಾತ ತನಿಖೆಗೆ ಗುಂಡುರಕರ್ ಒತ್ತಾಯ

ನಿಷ್ಪಕ್ಷಪಾತ ತನಿಖೆಗೆ ಗುಂಡುರಕರ್ ಒತ್ತಾಯ

ಕಲಬುರಗಿ,ಸೆ.18-ಕಮಲಾಪುರ ತಾಲ್ಲೂಕಿನ ಮಹಾಗಾಂವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2024ರಲ್ಲಿ ಹಾಗೂ 2026ರಲ್ಲಿ ದಾಖಲಾದ ಎರಡೂ ಪ್ರಕರಣಗಳಲ್ಲಿನ ಆರೋಪಿಗಳನ್ನು ಕೂಡಲೇ ಬಂಧಿಸಿ ನೊಂದವರ ಕುಟುಂಬಕ್ಕೆ ಸೂಕ್ತ ನ್ಯಾಯ ದೊರಕಿಸಿ ಕೊಡಬೇಕು ಎಂದು ಕರ್ನಾಟಕ ಯುವ ಶಕ್ತಿ ಸೈನ್ಯದ ರಾಜ್ಯ ಅಧ್ಯಕ್ಷ ಲಿಂಗರಾಜ ಬಿ.ಗುಂಡುರಕರ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಗುರುವಾರ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಅವರು, ಮಹಾಗಾಂವ ಪೊಲೀಸ್ ಠಾಣೆಯಲ್ಲಿ 2024ರಲ್ಲಿ ದಾಖಲಾದ ಪ್ರಕರಣದಲ್ಲಿ ಸುಮಾರು 2 ವರ್ಷ ಕಳೆದರೂ ಕೂಡ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಪ್ರಕರಣದ ಆರೋಪ ಪಟ್ಟಿಯನ್ನು ಸಲ್ಲಿಸಿಲ್ಲ. 2026ರಲ್ಲಿ ದಾಖಲಾದ ಪ್ರಕರಣದಲ್ಲಿ ಪ್ರಕರಣ ದಾಖಲಾಗಿ ಸುಮಾರು ಮೂರುವರೆ ತಿಂಗಳಾದರೂ ಠಾಣೆಯ ತನಿಖಾಧಿಕಾರಿಗಳು ಪ್ರಕರಣವನ್ನು ಸರಿಯಾಗಿ ತನಿಖೆ ಮಾಡದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಎರಡೂ ಪ್ರಕರಣಗಳ ಕುರಿತು ಕೂಲಕುಂಶವಾಗಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನೊಂದವರಿಗೆ ಸೂಕ್ತ ನ್ಯಾಯ ದೊರಕಿಸಿ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.