ಮದುವೆ ಮೆರವಣಿಗೆಯಲ್ಲಿ ಗನ್ ಸದ್ದು

ಯಾದಗಿರಿ,ಡಿ.7-ಸಂಬಂಧಿಕರ ಮದುವೆ ಮೆರವಣಿಗೆ ವೇಳೆ ಗ್ರಾಮ ಪಂಚಾಯತಿ ಸದಸ್ಯ, ರೌಡಿಶೀಟರ್ ಕೈಯಲ್ಲಿ ಗನ್ ಹಿಡಿದುಕೊಂಡು ಡ್ಯಾನ್ಸ್ ಮಾಡಿದಲ್ಲದೆ, ಡಬಲ್ ಬ್ಯಾರೆಲ್ ಗನ್‍ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಮುಂಡರಗಿ ಗ್ರಾಮ ಪಂಚಾಯತಿ ಸದಸ್ಯ, ರೌಡಿಶೀಟರ್ ಚಂದ್ರಶೇಖರ್ ಎಂಬಾತನೆ ಸಿದ್ದಾಪುರ ಗ್ರಾಮದಲ್ಲಿ ನಡೆದ ಸಂಬಂಧಿಕರ ಮದುವೆ ಮೆರವಣಿಗೆಯಲ್ಲಿ ಕೈಯಲ್ಲಿ ಗನ್ ಹಿಡಿದುಕೊಂಡು ಡ್ಯಾನ್ಸ್ ಮಾಡಿದಲ್ಲದೆ, ಡಬಲ್ ಬ್ಯಾರೆಲ್ ಗನ್‍ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಮದುವೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಮತ್ತು ಗ್ರಾಮಸ್ಥರಲ್ಲಿ ಭಯಭೀತಿಯನ್ನು ಉಂಟು ಮಾಡಿದ್ದಾನೆ. ಈ ಘಟನೆ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.