ಗುವಿವಿ 43ನೇ ಘಟಿಕೋತ್ಸವ: ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಕಲಬುರಗಿ,ಫೆ.24-ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಇಂದು ನಡೆದ 43ನೇ ಘಟಿಕೋತ್ಸವದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ವಿಶ್ವವಿದ್ಯಾಲಯದ ಜಾÐನಗಂಗಾ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿನ ಸಾಧನೆಗಾಗಿ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ಸಾಮಾಜಿಕ ಸೇವೆ ಪರಿಗಣಿಸಿ ಮಾಜಿ ಸಚಿವ ಮುರುಗೇಶ ನಿರಾಣಿ ಹಾಗೂ ಸಾಮಾಜಿಕ ಸೇವೆ ಗುರುತಿಸಿ ಹೋರಾಟಗಾರ ಕೇದಾರಲಿಂಗಯ್ಯ ಹಿರೇಮಠ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಪುಣೆಯ ಉನ್ನತ ರಕ್ಷಣಾ ತಂತ್ರಜ್ಞಾನ ಸಂಸ್ಥೆ (ಡೀಮ್ಡ್ ವಿಶ್ವವಿದ್ಯಾಲಯ)ಯ ವಿಶ್ರಾಂತ ಕುಲಪತಿ ಪೆÇ್ರ. ಎಲ್.ಎಂ. ಪಟ್ನಾಯಕ್ ಅವರು ಘಟಿಕೋತ್ಸವ ಭಾಷಣ ಮಾಡಿದರು.
ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯಗಳ ಸಮ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ, ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಶಿಕಾಂತ ಎಸ್.ಉಡಿಕೇರಿ, ಕುಲಸಚಿವ ಪ್ರೊ.ರಮೇಶ ಲಂಡನಕರ್, ಮೌಲ್ಯಮಾಪನ ಕುಲಸಚಿವ ಡಾ.ಎನ್.ಜಿ.ಕಣ್ಣೂರು, ವಿತ್ತಾಧಿಕಾರಿ ಜಯಾಂಬಿಕ ವೇದಿಕೆ ಮೇಲಿದ್ದರು.

77 ವಿದ್ಯಾರ್ಥಿಗಳಿಗೆ 172 ಚಿನ್ನದ ಪದಕ
43ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಪದವಿ ಕೋರ್ಸುಗಳಿಗೆ 24 ಹಾಗೂ ವಿವಿಧ ಸ್ನಾತಕೋತ್ತರ ಕೋರ್ಸುಗಳಿಗೆ 148 ಸೇರಿ ಒಟ್ಟಾರೆ 172 ಚಿನ್ನದ ಪದಕಗಳನ್ನು 58 ಮಹಿಳಾ ವಿದ್ಯಾರ್ಥಿಗಳು ಹಾಗೂ 19 ಪುರುಷ ವಿದ್ಯಾರ್ಥಿಗಳು ಸೇರಿದಂತೆ 77 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಇನ್ನುಳಿದಂತೆ 9 ಚಿನ್ನದ ಪದಕಗಳನ್ನು ನಗದು ಬಹುಮಾನ ರೂಪದಲ್ಲಿ ಪರಿವರ್ತಿಸಿ 14 ಮಹಿಳಾ ವಿದ್ಯಾರ್ಥಿಗಳು ಮತ್ತು 5 ಪುರುಷ ವಿದ್ಯಾರ್ಥಿಗಳು ಸೇರಿ 19 ವಿದ್ಯಾರ್ಥಿಗಳಿಗೆ ನೀಡಲಾಯಿತು.

ಚಿನ್ನದ ಹುಡುಗಿ ಚನ್ನಮ್ಮ

ಚಿನ್ನದ ಪದಕ ವಿಜೇತರಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ಕನ್ನಡ ಅಧ್ಯಯನ ಸಂಸ್ಥೆಯ ವಿದ್ಯಾರ್ಥಿನಿ ಕು. ಚನ್ನಮ್ಮ ಇವರು ಅತಿ ಹೆಚ್ಚು 11 ಚಿನ್ನದ ಪದಕಗಳಿಗೆ ಭಾಜನರಾಗಿದ್ದು, ಘಟಿಕೋತ್ಸವದಲ್ಲಿ ಇಂದು ಅವರಿಗೆ ಪದಕಗಳನ್ನು ನೀಡಲಾಯಿತು. ಪ್ರಾಣಿಶಾಸ್ತ್ರ ವಿಭಾಗದ ಕು. ರಾಹುಲ್ ಇವರು 9, ಎಂಬಿಎ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ಕು. ಸುರೇಖಾ 8, ರಾಜ್ಯಶಾಸ್ತ್ರ ವಿಷಯದಲ್ಲಿ ಸೇಡಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕು. ಶಮೀಮ ರಫತ್ 6, ಸಮಾಜ ಕಾರ್ಯ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ಕು. ದೀಪಾ 6, ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ಸುಬೀಯಾ ನೂರೈನ್ 5, ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಪ್ರಿಯಾಂಕಾ ರಾಠೋಡ್ 5, ಜೀವ ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿ ಕು. ಶಶಿಕುಮಾರ್ 5 ಹಾಗೂ ಕಲಬುರಗಿ ನಗರದ ಗುರುಕುಲ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕು. ಪ್ರೀತಿ ಜಿ. ಖೇಮ್ಕರ್ ಅವರು ಬಿಕಾಂ ಕೋರ್ಸಿನಲ್ಲಿ 5 ಚಿನ್ನದ ಪದಕ ಪಡೆದಿದ್ದಾರೆ.

123 ಅಭ್ಯರ್ಥಿಗಳಿಗೆ ಪಿ.ಎಚ್.ಡಿ. ಪದವಿ

43ನೇ ಘಟಿಕೋತ್ಸವದಲ್ಲಿ ವಿವಿಧ ನಿಕಾಯಗಳಲ್ಲಿ ಒಟ್ಟು 123 ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಕಲಾ ನಿಕಾಯದಲ್ಲಿ 30, ಸಮಾಜ ವಿಜ್ಞಾನ ನಿಕಾಯದಲ್ಲಿ 26, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದಲ್ಲಿ 47, ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದಲ್ಲಿ 9, ಶಿಕ್ಷಣ ನಿಕಾಯದಲ್ಲಿ 7 ಹಾಗೂ ಕಾನೂನು ನಿಕಾಯದಲ್ಲಿ 4 ವಿದ್ಯಾರ್ಥಿಗಳಿದ್ದಾರೆ. ಒಟ್ಟಾರೆಯಾಗಿ 62 ಪುರುಷ ಹಾಗೂ 61 ಮಹಿಳಾ ಸಂಶೋಧನಾ ವಿದ್ಯಾರ್ಥಿಗಳು ಪಿಎಚ್.ಡಿ ಪದವಿ ಪಡೆದರು.

19,133 ಅಭ್ಯರ್ಥಿಗಳಿಗೆ ಪದವಿ ಪ್ರದಾನ

ಪದವಿ ಕೋರ್ಸಿನಲ್ಲಿ 15,504, ಸ್ನಾತಕೋತ್ತರ ಕೋಸ್ರ್ನಲ್ಲಿ 3,462, ಪಿ.ಜಿ. ಡಿಪೆÇ್ಲಮಾ ಕೋರ್ಸಿನಲ್ಲಿ 44 ಹಾಗೂ ಪಿ.ಎಚ್.ಡಿ. ಪದವಿ 123 ಸೇರಿದಂತೆ ಒಟ್ಟಾರೆ 19,133 ವಿದ್ಯಾರ್ಥಿಗಳು ವಿವಿಧ ಪದವಿಗಳನ್ನು ಪಡೆದಿದ್ದು, ಇದರಲ್ಲಿ 10,463 ಪುರುಷ ಹಾಗೂ 8,670 ಮಹಿಳಾ ವಿದ್ಯಾರ್ಥಿಗಳು ಸೇರಿದ್ದಾರೆ.