Home ಜಿಲ್ಲೆ ಹ್ಯಾಂಡ್‍ಬಾಲ್ ಅಥಣಿ ಜೆ.ಎ. ಕಾಲೇಜಿನ ಬಾಲಕ ಮತ್ತು ಬಾಲಕಿಯರ ಎರಡೂ ತಂಡಕ್ಕೆ ಪ್ರಥಮ ಸ್ಥಾನ ರಾಜ್ಯಮಟ್ಟಕ್ಕೆ...

ಹ್ಯಾಂಡ್‍ಬಾಲ್ ಅಥಣಿ ಜೆ.ಎ. ಕಾಲೇಜಿನ ಬಾಲಕ ಮತ್ತು ಬಾಲಕಿಯರ ಎರಡೂ ತಂಡಕ್ಕೆ ಪ್ರಥಮ ಸ್ಥಾನ ರಾಜ್ಯಮಟ್ಟಕ್ಕೆ ಆಯ್ಕೆ

ಅಥಣಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್‍ಬಾಲ್ ಕ್ರೀಡಾಕೂಟದಲ್ಲಿ ಅಥಣಿಯ ಜೆ ಎ ಶಿಕ್ಷಣ ಸಂಸ್ಥೆಯ ಪಿ ಯು ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ
ಇತ್ತೀಚೆಗೆ ರಾಯಭಾಗದ ಕೆಎಲ್‍ಇ ಸಂಸ್ಥೆಯ ಮಲಗೌಡ ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಹ್ಯಾಂಡ್‍ಬಾಲ್ ಕ್ರೀಡಾಕೂಟದಲ್ಲಿ ಅಥಣಿಯ ಜೆ ಎ ಶಿಕ್ಷಣ ಸಂಸ್ಥೆಯ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಬಾಲಕರ ಹಾಗೂ ಬಾಲಕಿಯರ ಎರಡೂ ತಂಡಗಳು ಎದುರಾಳಿ ತಂಡಗಳನ್ನು ಮಣಿಸಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿವೆ. ರಾಜ್ಯಮಟ್ಟದ ಕ್ರೀಡಾಕೂಟವು ಡಿಸೆಂಬರ್ ತಿಂಗಳಲ್ಲಿ ಚಿತ್ರದುರ್ಗದಲ್ಲಿ ನಡೆಯಲಿದ್ದು, ಈ ಸ್ಪರ್ಧೆಯಲ್ಲಿ ಜೆ.ಎ. ಕಾಲೇಜಿನ ಎರಡೂ ತಂಡಗಳು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯನ್ನು ಪ್ರತಿನಿಧಿಸಲಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಜೆ.ಇ. ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ರಾಮ ಕುಲಕರ್ಣಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂದೀಪ್ ಸಂಗೋರಾಮ, ಜಂಟಿ ಕಾರ್ಯದರ್ಶಿ ಆನಂದ ಟೋಣಪಿ, ಪ್ರಾಚಾರ್ಯ ಮಹಾಲಿಂಗ ಮೇತ್ರಿ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಲ್ಲ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಕಾಲೇಜಿಗೆ ಮತ್ತಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.