ಲಕ್ಷೆ÷್ಮÃಶ್ವರ,ಅ.೧೩: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ನಾಶವಾಗಿದ್ದು ರೈತರು ಅತಿವೃಷ್ಟಿಯಿಂದ ಸಂಕಷ್ಟದಲ್ಲಿದ್ದು ಇಂತಹ ಸಂದರ್ಭದಲ್ಲಿ ರಾಷ್ಟಿçÃಕೃತ ಬ್ಯಾಂಕಿನವರು ಸಾಲ ಮರುಪಾವತಿ ಮಾಡುವಂತೆ ರೈತರಿಗೆ ನೋಟಿಸ್ ನೀಡಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಕೂಡಲೇ ಬ್ಯಾಂಕಿನವರಿಗೆ ನಿರ್ದೇಶನ ಮಾಡುವಂತೆ ಆಗ್ರಹಿಸಿ ಹಾವೇರಿ -ಗದಗ್ ಲೋಕಸಭಾ ಕ್ಷೇತ್ರದ ಸದಸ್ಯರು ಮಾಜಿ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರಿಗೆ ಸವಣೂರಿನಲ್ಲಿ ಗದಗ ಜಿಲ್ಲಾ ಭಾರತೀಯ ಕಿಸಾನ್ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಮನವಿ ಪತ್ರದಲ್ಲಿ ಗೋವಿನ ಜೋಳ ಮೆಣಸಿನ ಗಿಡ ಈರುಳ್ಳಿ, ಹೆಸರು ಎಲ್ಲವೂ ನಾಶವಾಗಿದ್ದು ರೈತರು ನಂಬಿದ ಬೆಳೆಗಳು ಕೈಕೊಟ್ಟಿದ್ದರಿಂದ ಇಡೀ ರೈತ ಸಂಕುಲ ಹೌಹಾರಿ ಕುಳಿತಿದೆ ಈಗ ಇಂತಹ ಸಂದರ್ಭದಲ್ಲಿಯೇ ಬ್ಯಾಂಕಿನವರು ನೋಟಿಸ್ ನೀಡುತ್ತಿದ್ದು ಇದರಿಂದ ಕಿರುಕುಳ ಉಂಟಾಗಿದೆ ಕೂಡಲೇ ಇದನ್ನು ಕೇಂದ್ರ ಸರಕಾರದಿಂದ ಸುತ್ತೋಲೆ ಹೊರಡಿಸಿ ಬ್ಯಾಂಕಿನವರು ರೈತರ ಮೇಲೆ ದಬ್ಬಾಳಿಕೆ ಮಾಡದಂತೆ ಕೇಂದ್ರ ಮಧ್ಯೆ ಪ್ರವೇಶಿಸಿ ರೈತರಿಗೆ ನೆರವು ನೀಡಬೇಕು ಎಂದು ಗದಗ ಜಿಲ್ಲಾ ಭಾರತೀಯ ಕಿಸಾನ್ ಸಂಘದ ಉಪಾಧ್ಯಕ್ಷ ಟಾಕಪ ಸಾತಪೂತೆ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.























