
ಬೆಂಗಳೂರು ಜೂ. ೬ – ಈ ತಿಂಗಳ ೧೮ರಂದು ರಾಜ್ಯ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಇಂದು ತಮ್ಮ ನಾಮಪತ್ರ ಸಲ್ಲಿಸಿದರು ವಿಧಾನ ಪರಿಷತ್ ಚುನಾವಣೆಯ ಚುನಾವಣಾ ಅಧಿಕಾರಿಯಾಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಅವರಿಗೆ ಬಿಕೆ ಹರಿಪ್ರಸಾದ್ ಇಂದು ತಮ್ಮ ನಾಮಪತ್ರ ಸಲ್ಲಿಸಿದರು ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಮಾಜಿ ಸಚಿವೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕರಾದ ಅಶೋಕ್ ಪಟ್ಟಣ ಅಲ್ಲಮಪ್ರಭು ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು




























