
ಬೆಂಗಳೂರು.ಜೂ.3- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಹೈಕಮಾಂಡ್ ನಿಂದು ಇಂದು ಅಧಿಕೃತ ಆದೇಶ ಹೊರಬಿದ್ದಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿದ್ದರು. ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಶಿವರಾಜ್ ತಂಗಡಗಿ, ಜಿ.ಪರಮೇಶ್ವರ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಹೆಸರುಗಳು ಕೇಳಿ ಬಂದಿದ್ದವು. ಕೊನೆಯದಾಗಿ ಮೂಲ ಕಾಂಗ್ರೆಸಿಗ, ಹಿಂದುಳಿದ ವರ್ಗದ ನಾಯಕ ಎಂಬ ಪ್ರಮುಖ ಅಂಶಗಳನ್ನು ಪರಿಗಣಿಸಿ 71 ವರ್ಷದ ಬಿ.ಕೆ.ಹರಿಪ್ರಸಾದ್ಗೆ ಕೆಪಿಸಿಸಿ ಪಟ್ಟ ನೀಡಿದೆ.


























