ಜ.೧೫ ರಂದು ಹರಿಹರದಲ್ಲಿ ಹರಜಾತ್ರಾ ಮಹೋತ್ಸವ : ಜಗದ್ಗುರು ವಚನಾನಂದ ಶ್ರೀ

ಅಥಣಿ: ಜ.೬:ಬರುವ ಜನವರಿ ೧೫ ರಂದು ಸಂಕ್ರಾAತಿ ಸಂಭ್ರಮದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ, ಹರಿಹರದಲ್ಲಿ ಹರಜಾತ್ರಾ ಮಹೋತ್ಸವ -೨೦೨೬ ವಿಶಿಷ್ಟ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು, ಅಥಣಿ ಹಾಗೂ ಸುತ್ತಮುತ್ತಲಿನ ತಾಲೂಕಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ವೀರಶೈವ ಲಿಂಗಾಯತ ಪಂಚಮಶಾಲಿ ಜಗದ್ಗುರು ಪೀಠ, ಹರಿಹರದ ವಚನಾನಂದ ಸ್ವಾಮೀಜಿ ಕರೆ ನೀಡಿದರು.
ಅವರು ಅಥಣಿ ಪಟ್ಟಣದಲ್ಲಿ ಹರಜಾತ್ರಾ ಮಹೋತ್ಸವ ಕಾರ್ಯಕ್ರಮದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹರಿಹರ ಜಗದ್ಗುರು ಪೀಠದಲ್ಲಿ ಪ್ರತಿವರ್ಷ ವಿವಿಧ ಧಾರ್ಮಿಕ ಹಾಗೂ ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಹಿಂದಿನ ವರ್ಷದಲ್ಲಿ ಸಾವಿರಾರು ನಿರುದ್ಯೋಗಿಗಳಿಗೆ ಉದ್ಯೋಗ ಮೇಳ ನಡೆಸುವ ಮೂಲಕ ನೂರಾರು ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ, ದೇಶದ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಜಯಶಾಲಿಯಾದ ಕಿತ್ತೂರಿನ ವೀರರಾಣಿ ಚೆನ್ನಮ್ಮಳ ವಿಜಯೋತ್ಸವದ
ದ್ವಿ- ಶತಮಾನೋತ್ಸವ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ವರ್ಷದಿಂದ ನಾಡಿನ ಸಾಧಕರಿಗೆ ” ವೀರರಾಣಿ ಕಿತ್ತೂರು ಚೆನ್ನಮ್ಮನ ಪ್ರಶಸ್ತಿ ಪ್ರಧಾನ ಮಾಡುವ ಸಮಾರಂಭ ಆಯೋಜಿಸಲಾಗಿದೆ. ಈ ವರ್ಷದ ಸಮಾರಂಭದ ಅಧ್ಯಕ್ಷರನ್ನಾಗಿ ಬಸವರಾಜ ಜೋರಾಪುರ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
‘ವೀರರಾಣಿ ಕಿತ್ತೂರು ಚನ್ನಮ್ಮಾ ಅವರ
ದ್ವಿ- ಶತಮಾನೋತ್ಸವ ಸಂಭ್ರಮಾಚರಣೆಯ ಸವಿನೆನಪಿಗೆ ಅವರ ಹೆಸರಿನಲ್ಲಿ ? ೨೦೦ ಮುಖ ಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ ನಾಣ್ಯವನ್ನು ಬಿಡುಗಡೆಗೊಳಿಸಿದ್ದು ಸಂತಸದ ವಿಷಯ ಎಂದು ಅವರು ”ರಾಜ್ಯ ಹಾಗೂ ಹೊರ ರಾಜ್ಯಗಳು ಸೇರಿದಂತೆ ವಿಶ್ವದಾದ್ಯಂತ ಗುರುತಿಸಿಕೊಂಡಿರುವ ಅಖಂಡ ಪಂಚಮಸಾಲಿ ಸಮಾಜವನ್ನು ಒಗ್ಗೂಡಿಸುವುದು ಪ್ರತಿ ವರ್ಷ ನಡೆಯುವ ಹರಜಾತ್ರೆ ಉದ್ದೆ?ಶವಾಗಿದೆ” ಎಂದು ತಿಳಿಸಿದರು.
ವೀರಶೈವ ಲಿಂಗಾಯತ ಪಂಚಮಸಾಲಿ ಅಭಿವೃದ್ಧಿ ಸೇವಾ ಸಮಿತಿಯ ಅಧ್ಯಕ್ಷ ಶಿವಾನಂದ ಗುಡ್ಡಾಪುರ ಮಾತನಾಡಿ ಹರಿಹರ ಪೀಠಾಧ್ಯಕ್ಷರಾಗಿದ್ದ ಲಿo. ಜಗದ್ಗುರು ಡಾ. ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳ ೧೩ನೇ ಸ್ಮರಣೋತ್ಸವ ನಡೆಯಲಿದೆ. ಇಂದಿನ ಪೀಠಾಧ್ಯಕ್ಷರು ಯೋಗಸಿಂಹಾಸನಾಧೀಶ್ವರ ವಚನಾನಂದ ಮಹಾ ಸ್ವಾಮಿಜಿ ಪೀಠಾರೋಹಣದ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿAದ ಜರಗಲಿವೆ. ಧಾರ್ಮಿಕ ಪ್ರವಚನಗಳು, ವಿಶೇಷ ಪೂಜೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ರಾಜ್ಯದ ವಿವಿಧ ಭಾಗಗಳಿಂದ ಶರಣರು ಭಕ್ತಾದಿಗಳು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ತನು ಮನ ಧನ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದರು.
ಈ ಸಂದರ್ಭದಲ್ಲಿ ವೀರಶೈವ ಪಂಚಮಸಾಲಿ ಸಮಾಜದ ಮುಖಂಡರಾದ ಶಿವು ಗುಡ್ಡಾಪೂರ, ವಿಜಯಕುಮಾರ ನೇಮಗೌಡ, ಸುರೇಶ ಚಿಕ್ಕಟ್ಟಿ, ಶಿವಾನಂದ ಮಾಲಗಾಂವಿ, ಶಿವರುದ್ರಪ್ಪ ಘುಳಪ್ಪನವರ, ರಾಮಣ್ಣಾ ಧರಿಗೌಡ, ಸುರೇಶ ವಾಡೇದ, ರಾಜು ಗುಡೋಡಗಿ, ಎಸ್.ಪಿ. ತಾಂವಶಿ, ಚನ್ನಪ್ಪ ಹಂಚಿನಾಳ, ಶಿವಾನಂದ ತಂಗಡಿ, ಸದಾಶಿವ ಚಿಕ್ಕಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುರೇಶ ಚಿಕ್ಕಟ್ಟಿ ಸ್ವಾಗತಿಸಿದರು. ಶಿವಾನಂದ ಮಾಲಗಾಂವಿ ವಂದಿಸಿದರು