ಹಸರಗುಂಡಗಿ ; ಗ್ರಾ. ಪಂ. ಕಾರ್ಯಾಲಯದಲ್ಲಿ “ಸಂವಿಧಾನ” ದಿನ ಆಚರಣೆ

ಅಫಜಲಪುರ ;ನ.೨೬: ತಾಲೂಕಿನ ಹಸರಗುಂಡಗಿ ಗ್ರಾಮ ಪಂಚಾಯತಿ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ “ಸಂವಿಧಾನ” ದಿನವನ್ನು ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀ ಭಜಂತ್ರಿ, ಗ್ರಾ.ಪಂ. ಅಧ್ಯಕ್ಷರ ಉಪಸ್ಥಿತಿಯಲ್ಲಿ ಸುಭಾಷ್ ದುಖಾನದಾರ್, ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮದ ಮುಖಂಡರು ಭಾಗವಹಿಸಿದ್ದರು.