Home ಮುಖಪುಟ ಸುದ್ದಿ ದ್ವೇಷ ಭಾಷಣ: ಸಿಟಿ ರವಿಗೆ ನೋಟಿಸ್

ದ್ವೇಷ ಭಾಷಣ: ಸಿಟಿ ರವಿಗೆ ನೋಟಿಸ್

ಬೆಂಗಳೂರು ಜು.೨೬-ಮುಲ್ಲಾಗಳಿಗೂ, ನೀಟ್ ಪರೀಕ್ಷೆಗೂ ಏನು ಸಂಬಂಧ ಎಂದು ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.


ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಕ್ಕೆ ಪ್ರಚೋದನೆ ನೀಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮುಸ್ಲಿಂ ಒಕ್ಕೂಟ ಪೊಲೀಸರಿಗೆ ದೂರು ನೀಡಿತು. ಈ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಹಾಜರಾಗುವಂತೆ ಸಿಟಿ ರವಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ ಚಿಕ್ಕಮಗಳೂರಿನ ಇನ್ಸ್ಪೆಕ್ಟರ್ ಅಭಯ್ ಪ್ರಕಾಶ ಅವರು ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿರುವ ಸಿಟಿ ರವಿ ಅವರ ನಿವಾಸಕ್ಕೆ ತೆರಳಿ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.