Home ಜಿಲ್ಲೆ ಕಲಬುರಗಿ ಪೊಲೀಸ್ ಟ್ರೈನಿಂಗ್ ಸೆಂಟರ್‍ನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ಪೊಲೀಸ್ ಟ್ರೈನಿಂಗ್ ಸೆಂಟರ್‍ನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕಲಬುರಗಿ: ನಗರದ ಪೆÇಲೀಸ್ ಟ್ರೈನಿಂಗ್ ಸೆಂಟರ್‍ನಲ್ಲಿ ಪೆÇಲೀಸ್ ಸಿಬ್ಬಂದಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸಿದ ನ್ಯೂಟ್ರಿಷನ್ ಮತ್ತು ಡಯಟ್ ಕುರಿತು ವಿಶೇಷ ಉಪನ್ಯಾಸಕರು ಶ್ರೀನಿವಾಸರೆಡ್ಡಿ ಅವರು ಮಾತನಾಡಿ, ಪೆÇಲೀಸ್ ಸಿಬ್ಬಂದಿ ಕರ್ತವ್ಯದ ಒತ್ತಡದ ನಡುವೆಯೂ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯವಾಗಿದೆ. ಸಮಯಕ್ಕೆ ಸರಿಯಾಗಿ ಪೌಷ್ಟಿಕ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಸಮರ್ಪಕ ನಿದ್ರೆ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವ ಮೂಲಕ ಹಲವು ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಬಹುದು ಎಂದು ಸಲಹೆ ನೀಡಿದರು.

ಪೆÇಲೀಸ್ ಸಿಬ್ಬಂದಿ ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೂ ಆದ್ಯತೆ ನೀಡಬೇಕು ಎಂದು ಡಿಐಜಿಪಿ ಹಾಗೂ ಪಿಟಿಸಿ ಪ್ರಿನ್ಸಿಪಾಲ್ ಪುಟ್ಟಮಾದಯ್ಯ ತಿಳಿಸಿದರು. ಕರ್ತವ್ಯದ ಒತ್ತಡವನ್ನು ಸಮರ್ಥವಾಗಿ ನಿಭಾಯಿಸಲು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ಮುನ್ನೆಚ್ಚರಿಕೆ ಕ್ರಮಗಳು, ನಿಯಮಿತ ಆರೋಗ್ಯ ತಪಾಸಣೆಯ ಮಹತ್ವ, ಒತ್ತಡ ನಿರ್ವಹಣೆ ಹಾಗೂ ದೈನಂದಿನ ಜೀವನದಲ್ಲಿ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಕುರಿತು ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಡಿಜಿ ರಾಜಣ್ಣ ಆಙSP ಹಾಗೂ ಪಿಐ ರಾಘವೇಂದ್ರ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ಕರ್ತವ್ಯದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಬಹುದು ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಕಮಾಂಡೆಂಟ್ ಪ್ರಕಾಶ್. ಉಪ ಕಮಾಂಡೆಂಟ್ ಚನ್ನಬಸವ ಸೇರಿದಂತೆ ಪೆÇಲೀಸ್ ಟ್ರೈನಿಂಗ್ ಸೆಂಟರ್‍ನ ಅಧಿಕಾರಿಗಳು, ಪೆÇಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಕ್ಷೇತ್ರದ ಸಂಬಂಧಪಟ್ಟವರು ಉಪಸ್ಥಿತರಿದ್ದರು.