
ಕೋಲಾರ,ಸೆ,೧೫- ಗಣೇಶ ಹಬ್ಬದ ಪ್ರಯುಕ್ತ ನಗರಸಭೆಯ ಆರೋಗ್ಯ ನಿರೀಕ್ಷಕರಾದ ಸಂಜಯ್ ವಿ. ಅವರು ಸ್ವತಃ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಹಾಗೂ ವೃತ್ತದ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವ ಮೂಲಕ ಉತ್ತಮ ಕಾರ್ಯಕ್ಕೆ ಮಾದರಿಯಾಗಿದ್ದಾರೆ.
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಆರೋಗ್ಯ ನಿರೀಕ್ಷಕರಾದ ಸಂಜಯ್ ವಿ. ಅವರ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಸ್ವಚ್ಛತೆ ಕೇವಲ ಇಲಾಖೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂಬ ಸಂದೇಶವನ್ನು ಸಾರಿದೆ.

























