
ತಾಳಿಕೋಟೆ: ಎಲ್ಲ ಸಂಪತ್ತಿಗಿAತ ಆರೋಗ್ಯ ಸಂಪತ್ತು ದೊಡ್ಡದು. ಆರೋಗ್ಯ ಉತ್ತಮವಾಗಿದ್ದಾಗ ಮಾತ್ರ ವ್ಯಕ್ತಿಯು ತನ್ನ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯ. ಪೊಲೀಸ್ ಸಿಬ್ಬಂದಿ ಹಗಲು-ರಾತ್ರಿ ಎನ್ನದೆ ನಿರಂತರವಾಗಿ ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಂಡಿರುವುದರಿAದ ಕರ್ತವ್ಯದ ಒತ್ತಡದ ನಡುವೆಯೂ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ರೋಟರಿಯನ್ ಡಾ. ವ್ಹಿ.ಎಸ್.ಕಾರ್ಚಿ ಅವರು ಹೇಳಿದರು.
ತಾಳಿಕೋಟೆ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದವರಿಗಾಗಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು. ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಕರ್ತವ್ಯದ ಸಂದರ್ಭದಲ್ಲಿ ವಿವಿಧ ರೀತಿಯ ಒತ್ತಡ ಹಾಗೂ ಸವಾಲುಗಳನ್ನು ಎದುರಿಸುವ ಅವರು ತಮ್ಮ ವೈಯಕ್ತಿಕ ಆರೋಗ್ಯವನ್ನು ನಿರ್ಲಕ್ಷಿಸಬಾರದು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರ ಜೊತೆಗೆ ಉತ್ತಮ ಆಹಾರ ಪದ್ಧತಿ, ವ್ಯಾಯಾಮ ಹಾಗೂ ಆರೋಗ್ಯಕರ ಜೀವನಶೈಲಿಗೆ ಆದ್ಯತೆ ನೀಡಬೇಕು ಎಂದು ಡಾ. ಕಾರ್ಚಿ ಸಲಹೆ ನೀಡಿದರು. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಮುನ್ನೆಚ್ಚರಿಕೆಯಾಗಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ವೈದ್ಯಕೀಯ ಸಲಹೆ ಹಾಗೂ ಚಿಕಿತ್ಸೆ ಪಡೆದುಕೊಂಡರೆ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಅವರು ತಿಳಿಸಿದರು.
ರೋಟರಿ ಸಂಸ್ಥೆಯ ಅಧ್ಯಕ್ಷ ಘನಶಾಮ ಚವ್ಹಾಣ ಹಾಗೂ ಡಾ.ಎ.ಎ.ನಾಲಬಂದ ಅವರು ಮಾತನಾಡಿ, ಸಮಾಜ ಸೇವೆಯ ಭಾಗವಾಗಿ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡುವುದು ರೋಟರಿ ಸಂಸ್ಥೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ. ಪೊಲೀಸ್ ಸಿಬ್ಬಂದಿ ದಿನನಿತ್ಯ ಸಾರ್ವಜನಿಕರಿಗಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದವರಿಗಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಆರೋಗ್ಯ ತಪಾಸಣೆಯಿಂದ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಬೇಕು. ಮುಂದಿನ ದಿನಗಳಲ್ಲಿಯೂ ರೋಟರಿ ಸಂಸ್ಥೆಯ ವತಿಯಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತಹ ವಿವಿಧ ಆರೋಗ್ಯ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಘನಶಾಮ ಚವ್ಹಾಣ ತಿಳಿಸಿದರು.
೬೦ಕ್ಕೂ ಹೆಚ್ಚು ಸಿಬ್ಬಂದಿ, ಕುಟುಂಬಸ್ಥರ ತಪಾಸಣೆ
ಶಿಬಿರದಲ್ಲಿ ತಾಳಿಕೋಟೆ ಪೊಲೀಸ್ ಠಾಣೆಯ ೬೦ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದವರು ಭಾಗವಹಿಸಿ ವಿವಿಧ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಪಿಎಸ್ಐ ಶ್ರೀಮತಿ ಜ್ಯೋತಿ ಖೋತ್ ಅವರು ಮಾತನಾಡಿದರು.
ಶಿಬಿರದಲ್ಲಿ ರೋಟರಿಯನ್ ಡಾ. ಆನಂದ ಭಟ್, ಡಾ. ಎ.ಎನ್. ನಾಲಬಂದ, ಅಶೋಕ ಬಳಗಾನೂರ, ಪ್ರಭುಗೌಡ ಮದರಕಲ್ಲ, ಚಿನ್ನಪ್ಪಗೌಡ ಮಾಳಿ, ಮಲ್ಲಿಕಾರ್ಜುನ ಕತ್ತಿ, ಮುರುಗೆಪ್ಪ ಸರಶೆಟ್ಟಿ, ರಾಜು ಸಜ್ಜನ, ಮಲ್ಲಿಕಾರ್ಜುನ ನಾಗರಾಳ, ಶ್ರೀನಿವಾಸ ಸೋನಾರ, ಶಾಮ ಹಂಚಾಟೆ, ಸಂಜೀವ ಹೇರಿ, ಬಸವರಾಜ ಕುಂಭಾರ, ಸುಭಾಸ ಬಬಲೇಶ್ವರ, ಪಿಎಸ್ಐ ಎಸ್.ಎಂ.ಪಡಶೆಟ್ಟಿ, ಪ್ರಸೂತಿ ತಜ್ಞರಾದ ಡಾ. ಗಂಗಾAಬಿಕಾ ಪಾಟೀಲ, ಡಾ. ಶಾಂತಾ ಇಬ್ರಾಹಿಂಪುರ, ದಂತ ವೈದ್ಯ ಡಾ. ಜಾಕೀರ ಅಹ್ಮದ್ ಸೇರಿದಂತೆ ವಿವಿಧ ವೈದ್ಯರು ಭಾಗವಹಿಸಿ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ವೈದ್ಯರು ಹಾಗೂ ರೋಟರಿ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ರೋಟರಿಯನ್ ಅಶೋಕ ಬಳಗಾನೂರ ನಿರೂಪಿಸಿದರು.
ತಾಳಿಕೋಟೆಯ ರೋಟರಿ ಸಂಸ್ಥೆಯು ಆರೋಗ್ಯ ಶಿಬಿರದ ಜೊತೆಗೆ ಪರಿಸರ ಪೂರ್ವಕ ಕಾಳಜಿಯಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಸಾಗಿದೆ ಎಲ್ಲ ಕಾರ್ಯಗಳಿಗೆ ಕ್ಲಬಿನ್ ಸದಸ್ಯರು ಕೈಜೋಡಿಸುತ್ತಾ ಸಾಗಿದ್ದಾರೆ ಇದರ ಪರಿಣಾಮ ರೋಟರಿ ಸಂಸ್ಥೆಯು ತಾಳಿಕೋಟೆಯಲ್ಲಿ ಸಾಮಾಜಿಕ ಸೇವೆಯಲ್ಲಿ ಹೆಚ್ಚಿಗೆ ತೊಡಗಿಕೊಳ್ಳಲು ಸಾದ್ಯವಾಗಿದೆ. ಘನಶಾಮ ಚವ್ಹಾಣ
ರೋಟರಿ ಸಂಸ್ಥೆಯ ಅಧ್ಯಕ್ಷರು.





















