Home ಜಿಲ್ಲೆ ಬೀದರ್ ಆರಂಭವಾಗದ ಹೃದ್ರೋಗ ಘಟಕ: ರೋಗಿಗಳಿಗೆ ತೊಂದರೆ

ಆರಂಭವಾಗದ ಹೃದ್ರೋಗ ಘಟಕ: ರೋಗಿಗಳಿಗೆ ತೊಂದರೆ

ಬೀದರ್: ಇಲ್ಲಿಯ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಉದ್ಘಾಟನೆಗೊಂಡು ವರ್ಷ ಕಳೆದರೂ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಘಟಕ ಕಾರ್ಯಾರಂಭ ಮಾಡದ ಕಾರಣ ರೋಗಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿಯ ಕಲಬುರಗಿ ವಿಭಾಗೀಯ ಅಧ್ಯಕ್ಷ ಸಂಗಮೇಶ ಬಾವಿದೊಡ್ಡಿ ತಿಳಿಸಿದ್ದಾರೆ.
ರೂ. ೧೫ ಕೋಟಿ ವೆಚ್ಚದ ಹೃದ್ರೋಗ ಘಟಕ ಸ್ಥಾಪನೆಯಿಂದ ಜಿಲ್ಲೆಯ ಹೃದ್ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಜನ ನಿರೀಕ್ಷಿಸಿದ್ದರು. ಅದೆಲ್ಲ ಸಂಪೂರ್ಣ ಹುಸಿಯಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟಕವನ್ನು ಉದ್ಘಾಟಿಸಿದ್ದರು. ಆದರೆ, ಸಂಬAಧಪಟ್ಟವರ ನಿರ್ಲಕ್ಷ್ಯದಿಂದ ಘಟಕ ಈವರೆಗೂ ಆರಂಭವಾಗಿಲ್ಲ. ಕೋಟ್ಯಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ದೂಳು ತಿನ್ನುತ್ತಿವೆ ಎಂದು ತಿಳಿಸಿದ್ದಾರೆ.
ಘಟಕ ಪ್ರಾರಂಭವಾಗದಿರುವುದರಿAದ ಜಿಲ್ಲೆಯ ಹೃದ್ರೋಗಿಗಳು ಚಿಕಿತ್ಸೆಗಾಗಿ ನೆರೆಯ ಮಹಾರಾಷ್ಟ್ರದ ಸೋಲಾಪುರ, ತೆಲಂಗಾಣದ ಹೈದರಾಬಾದ್ ಹಾಗೂ ಪಕ್ಕದ ಜಿಲ್ಲೆ ಕಲಬುರಗಿಗೆ ಹೋಗಬೇಕಾಗಿದೆ ಎಂದು ಹೇಳಿದ್ದಾರೆ.
ಸಂಬAಧಪಟ್ಟವರು ಕೂಡಲೇ ಹೃದ್ರೋಗ ಘಟಕ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.