Home ಮುಖಪುಟ ಸುದ್ದಿ ಜಮ್ಮು-ಕಾಶ್ಮೀರದಲ್ಲಿ ವರುಣನ ಅಬ್ಬರ: 23 ಮಂದಿ ಸಾವು

ಜಮ್ಮು-ಕಾಶ್ಮೀರದಲ್ಲಿ ವರುಣನ ಅಬ್ಬರ: 23 ಮಂದಿ ಸಾವು

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ವರುಣನ ಆರ್ಭಟಕ್ಕೆ 23 ಮಂದಿ ಬಲಿಯಾಗಿದ್ದಾರೆ. ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಹಲವು ವಾಹನಗಳು ಕೊಚ್ಚಿಹೋಗಿವೆ.
ಪೂಂಚ್ ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿ ನಾಲ್ವರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟಿದ್ದಾರೆ.


ಜಮ್ಮು-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ರಗ್ಗಿ ನಲ್ಲಾ ಬಳಿಯ ಗುಡ್ಡ ಕುಸಿದು ಅನೇಕ ವಾಹನಗಳು ಸಿಲುಕಿವೆ. ಬಸ್ಸಿನ ಮೇಲೆ ಭಾರೀ ಗಾತ್ರದ
ಬಂಡೆ ಬಿದ್ದು ಇಬ್ಬರು ಸಾವನ್ನಪ್ಪಿದ್ದು, ಹಲವಾರು ಗಾಯಗೊಂಡಿದ್ದಾರೆ.


ದಕ್ಷಿಣ ಸಿಕ್ಕಿಂನ ಸಮರ್ದುಂಗ್ ಬಳಿ ಇರುವ ಜಲವಿದ್ಯುತ್ ಯೋಜನೆಯ ಸುರಂಗ ಮಾರ್ಗದಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಈ ವೇಳೆ ಸುರಂಗದೊಳಗೆ ವಿಷಕಾರಿ ಅನಿಲ ಸೋರಿಕೆ ಯಾಗಿದ್ದು, ಕನಿಷ್ಠ 10 ಮಂದಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. 17 ಮಂದಿ ಸಿಲುಕಿಕೊಂಡಿದ್ದಾರೆ.


. ನಾಮ್ಚಿ ಜಿಲ್ಲೆಯ 5ನೇ ಹಂತದ ತೀಸ್ತಾ ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಕಾರ್ಮಿಕರು ಸಿಲುಕಿದ್ದು, ರಕ್ಷಣಾ ತಂಡಗಳು ಕಾರ್ಯಾಚರಣೆ ಮುಂದುವರಿಸಿವೆ. ದುರಂತದ ಬಗ್ಗೆ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್‌ಗೆ ಕರೆ ಮಾಡಿ ಪ್ರಧಾನಿ ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.