ಬೆಂಗಳೂರು,ಆ.೨೫-ನಗರದ ಜೆ.ಸಿ ರಸ್ತೆಯಲ್ಲಿ ಹಲವು ತಿಂಗಳಿನಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು,ಇಂದಿನಿಂದ ಆ. ೩೦ರ ವರೆಗೆ ಈ ರಸ್ತೆಯಲ್ಲಿ ಬಸ್ ಸೇರಿ ಭಾರಿ ಗಾತ್ರದ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ವೈಟ್ ಟಾಪಿಂಗ್ ಕಾಮಗಾರಿ ಹಿನ್ನಲೆಯಲ್ಲಿ ಜೆ.ಸಿ ರಸ್ತೆಯಲ್ಲಿ ಬಸ್ ಹಾಗೂ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದು, ಜೊತೆಗೆ ಪರ್ಯಾಯ ಮಾರ್ಗಗಳನ್ನು ತಿಳಿಸಲಾಗಿದೆ.
ಜೆಸಿ ರಸ್ತೆ, ಮಿನರ್ವಾ ಸರ್ಕಲ್ ಕಡೆಗೆ ಭಾರಿ ಗಾತ್ರದ ವಾಹನಗಳು ಸೇರಿದಂತೆ ಬಸ್‌ಗಳಿಗೆ ಅವಕಾಶವಿಲ್ಲ.
ಪರ್ಯಾಯ ಮಾರ್ಗ:
ರಾಮಕೃಷ್ಣ ಆಶ್ರಮ, ಬುಲ್ ಟೆಂಪಲ್ ರಸ್ತೆ, ಚಾಮರಾಜ ಪೇಟೆ, ಗೂಡ್ಸ್ ಶೆಡ್ ರಸ್ತೆ ಮಾರ್ಗವಾಗಿ ಮೆಜೆಸ್ಟಿಕ್ ಕಡೆಗೆ ಸಂಚರಿಸುವುದು.
ಕಲಾಸಿಪಾಳ್ಯ ಬಸ್ ನಿಲ್ದಾಣದಿಂದ ಕೆ ಆರ್ ರಸ್ತೆ, ಲಾಲ್ ಬಾಗ್ ವೆಸ್ಟ್ ಗೇಟ್, ಅಶೋಕ ಪಿಲ್ಲರ್ ಸಿದ್ಧಾಪುರ ರಸ್ತೆ ಮಾರ್ಗವಾಗಿ ಹೊಸೂರು ರಸ್ತೆ ಸೇರುವುದು.
ರಾಮಕೃಷ್ಣ ಆಶ್ರಮ, ಬುಲ್ ಟೆಂಪಲ್ ರಸ್ತೆ, ಚಾಮರಾಜ ಪೇಟೆ, ಗೂಡ್ಸ್ ಶೆಡ್ ರಸ್ತೆ ಮಾರ್ಗವಾಗಿ ಮೆಜೆಸ್ಟಿಕ್ ಕಡೆಗೆ ಸಂಚರಿಸುವುದು.
ಕಲಾಸಿಪಾಳ್ಯ ಬಸ್ ನಿಲ್ದಾಣದಿಂದ ಕೆ ಆರ್ ರಸ್ತೆ, ಲಾಲ್ ಬಾಗ್ ವೆಸ್ಟ್ ಗೇಟ್, ಅಶೋಕ ಪಿಲ್ಲರ್ ಸಿದ್ದಾಪುರ ರಸ್ತೆ ಮಾರ್ಗವಾಗಿ ಹೊಸೂರು ರಸ್ತೆ ಸೇರುವುದು.
ಕಾಮಗಾರಿ ವಿಳಂಬ:
ಹೊಸೂರು ರಸ್ತೆಯಿಂದ ಡಬಲ್ ರಸ್ತೆ, ರಿಚ್ಮಂಡ್ ಸರ್ಕಲ್, ಹನ್ಸನ್ ಸರ್ಕಲ್, ಕೆ.ಜಿ. ರಸ್ತೆ ಮಾರ್ಗವಾಗಿ ಮೆಜೆಸ್ಟಿಕ್ ಕಡೆಗೆ ಸಂಚರಿಸಬಹುದು.
ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಜೆ.ಸಿ ರಸ್ತೆಯಲ್ಲಿ ಅತಿಹೆಚ್ಚು ವಾಹನಗಳ ಸಂಚಾರದಿಂದಾಗಿ ಕಾಮಗಾರಿಯಲ್ಲಿ ವಿಳಂಬವಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.
























