
ಸೈದಾಪುರ:ಮಾ.20:ಸ್ಯಾನಿಟರಿ ನ್ಯಾಪಕಿನ್ ಬಳಕೆ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ಸಹಾಯಕವಾಗುತ್ತದೆ ಎಂದು ಡಾ.ಅಶೋಕರಡ್ಡಿ ಅಭಿಪ್ರಾಯಪಟ್ಟರು.
ಪಟ್ಟಣದ ಸರಕಾರಿ ಸಮೂದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡ ಶುಚಿ ಉಚಿತ ಸ್ಯಾನಿಟರಿ ನ್ಯಾಪ್‍ಕಿನ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಹದಿಹರೆಯದ ಹೆಣ್ಣು ಮಕ್ಕಳಿಗೆ ಶುಚಿ ಯೋಜನೆಯಿಂದ ಅನುಕೂಲವಾಗಲಿದೆ. ಮಹಿಳೆಯರು ಮಾಸಿಕ ಚಕ್ರದ ಸಮಯದಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದ್ದೂ ಇಗಾಗಲೇ ಪಟ್ಟಣದ ಶಾಲಾ ಕಾಲೇಜುಗಳಲ್ಲಿ ಇದರ ಬಗಗೆ ಮಹಿಳಾ ಆರೋಗ್ಯ ತಜ್ಞರಿಂದ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗಿದೆ. ಸಂಬಂದಿಸಿದ ಸಂಸ್ಥೆಯ ಮುಖ್ಯಸ್ಥರು ಇವುಗಳನ್ನು ವಿತರಣೆ ಮಾಡಿ ಮಾಹಿತಿ ನೀಡುವಂತೆ ಸಲಹೆ ನೀಡಿದರು. ವಿವಿಧ ಶಾಲಾ ಕಾಲೇಜುಗಳಿಗೆ ಸ್ಯಾನಿಟರಿ ನ್ಯಾಪಕಿನ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಡಾ.ಅಶ್ವಿನಿ, ಸೈದಾಪುರ ಮಲ್ಹಾರ ಕಾರಡ್ಡಿ ಮತ್ತು ಬಸವಂತ್ರಾಯ ಸಿದ್ದಪ್ಪ ಸ್ಮಾರಕ ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ, ಕರಬಸಯ್ಯ ದಂಡಿಗಿಮಠ, ಆರ್‍ಕೆಎಸ್‍ಕೆ ಕೌನ್ಸ್‍ಲರ ಶಿವಶಂಕರರಡ್ಡಿ, ಸಮೂದಾಯದ ಆರೋಗ್ಯ ಕೇಂದ್ರದ ಉಸ್ಮಾನ, ಕಸ್ತೂರಿ, ಶೀಭಾ, ಪ್ರೀತಿ, ಚಂದ್ರಶೇಖರ ಸೇರಿದಂತೆ ಇತರರಿದ್ದರು.






















