
ಬೆಂಗಳೂರು,ಮಾ.೨:ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಲ್ಲಿ ಸಿಲುಕಿರುವ ಬೆಂಗಳೂರು ನಗರ ಜಿಲ್ಲೆಯ ನಿವಾಸಿಗಳ ರಕ್ಷಣೆ ಮತ್ತು ಅವರ ಯೋಗಕ್ಷೇಮಕ್ಕಾಗಿ ಜಿಲ್ಲಾ ಆಡಳಿತ ತುರ್ತು ಕ್ರಮ ಕೈಗೊಂಡಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ .ಜಿ ಅವರು ಪ್ರಕಟಣೆ ಮೂಲಕ ತಿಳಿಸಿದರು. ಯುದ್ಧಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಜಿಲ್ಲೆಯ ನಿವಾಸಿಗಳ ವಿವರಗಳನ್ನು ಸಂಗ್ರಹಿಸಿ, ಅಗತ್ಯ ನೆರವು ಮತ್ತು ಸಮನ್ವಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದೆ.
ಸಂಬಂಧಪಟ್ಟವರು ತಕ್ಷಣವೇ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಸಿಲುಕಿರುವವರ ಹೆಸರು, ಪಾಸ್ಪೋರ್ಟ್ ವಿವರ, ಪ್ರಸ್ತುತ ಇರುವ ಸ್ಥಳ, ಸಂಪರ್ಕ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ.
ಸಂಪರ್ಕ ವಿವರಗಳು.-
ದೂರವಾಣಿ: ೦೮೦-೨೨೯೬೭೨೦೦
ವಾಟ್ಸಪ್ ಸಂಖ್ಯೆ: ೮೧೦೫೯೯೭೦೭ / ೯೫೩೮೦೪೭೧೯೯
ಸಂದೇಶದ ಮೂಲಕ ಅಥವಾ ನೇರ ಕರೆ ಮೂಲಕ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಆಡಳಿತವು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸಿ, ಸಂತ್ರಸ್ತರ ರಕ್ಷಣೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಲಾಗಿದೆ.






























