Home ಕ್ರೈಂ ಸುದ್ದಿಗಳು ಹಿಪ್ಪರಗಿ ಕಾರು ಸ್ಫೋಟ ಪ್ರಕರಣ: ತನಿಖೆ ಚುರುಕು ಸಿಸಿ ಟಿವಿಯಲ್ಲಿ ಅನುಮಾನಾಸ್ಪದ ಚಲನವಲನ ಪತ್ತೆಯಾಗಿಲ್ಲ: ಎಸ್‍ಪಿ...

ಹಿಪ್ಪರಗಿ ಕಾರು ಸ್ಫೋಟ ಪ್ರಕರಣ: ತನಿಖೆ ಚುರುಕು ಸಿಸಿ ಟಿವಿಯಲ್ಲಿ ಅನುಮಾನಾಸ್ಪದ ಚಲನವಲನ ಪತ್ತೆಯಾಗಿಲ್ಲ: ಎಸ್‍ಪಿ ಸಿದ್ದಾರ್ಥ ಗೋಯಲ್

ಜಮಖಂಡಿ, ಜು. 27:ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರೊಂದು ಶನಿವಾರ ರಾತ್ರಿ ಸುಮಾರು 10:45ಕ್ಕೆ ಏಕಾಏಕಿ ಸ್ಫೋಟಗೊಂಡ ಪ್ರಕರಣದ ತನಿಖೆ ಚುರುಕುಗೊಂಡಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನೊಳಗೆ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಫೋಟಗೊಂಡ ಕಾರು ಹಿಪ್ಪರಗಿ ಗ್ರಾಮದ ಯುವರಾಜ ವೈನ್‍ಶಾಪ್ ವ್ಯವಸ್ಥಾಪಕ ಹಣಮಂತ ಅಥಣಿ ಅವರಿಗೆ ಸೇರಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಡಿವೈಎಸ್‍ಪಿ ಸಯ್ಯದ್ ರೋಷನ್ ಜಮೀರ್, ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್‍ಐ ಗಂಗಾಧರ ಪೂಜೇರಿ, ಅಪರಾಧ ವಿಭಾಗದ ಅಧಿಕಾರಿಗಳು ಹಾಗೂ ಪೆÇಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾನುವಾರ ಬೆಳಗ್ಗೆಯಿಂದಲೇ ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ (ಃಆಆS), ಎಎಸ್‍ಸಿ ಬೆಳಗಾವಿ, ಹುಬ್ಬಳ್ಳಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ನ್ಯಾಯ ವಿಜ್ಞಾನ ಪ್ರಯೋಗಾಲಯ (ಈSಐ), ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

ಕಾರು ಅವಶೇಷಗಳು ಸುಮಾರು 40 ರಿಂದ 50 ಮೀಟರ್ ದೂರದವರೆಗೆ ಚದುರಿರುವ ಹಿನ್ನೆಲೆಯಲ್ಲಿ ಸ್ಫೋಟದ ನಿಖರ ಕಾರಣ ಪತ್ತೆಹಚ್ಚಲು ವೈಜ್ಞಾನಿಕ ಪರೀಕ್ಷೆ ನಡೆಸಲಾಗುತ್ತಿದೆ.

ಸಿಸಿ ಟಿವಿಯಲ್ಲಿ ಅನುಮಾನಾಸ್ಪದ ಚಲನವಲನ ಇಲ್ಲ
ಪ್ರಕರಣ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಕಾರನ್ನು ಶನಿವಾರ ಮಧ್ಯಾಹ್ನ ಸುಮಾರು 4:30ಕ್ಕೆ ವೈನ್‍ಶಾಪ್ ಎದುರು ನಿಲ್ಲಿಸಲಾಗಿತ್ತು ಎಂದು ತಿಳಿಸಿದರು.
ರಾತ್ರಿ 10:45ಕ್ಕೆ ಸ್ಫೋಟ ಸಂಭವಿಸಿದ್ದು, ಈ ಸಂಪೂರ್ಣ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಅನುಮಾನಾಸ್ಪದ ವ್ಯಕ್ತಿ ಕಾರಿನ ಬಳಿ ಬಂದಿರುವುದು ಕಂಡುಬಂದಿಲ್ಲ. ರಾತ್ರಿ 9:45ರ ಸುಮಾರಿಗೆ ಕಾರಿನ ಬಳಿ ಬಂದ ಮೂವರು ಗ್ರಾಹಕರನ್ನು ಪರಿಶೀಲಿಸಲಾಗಿದ್ದು, ಅವರ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

ಎಕ್ಸ್‍ಪೆÇ್ಲೀಸಿವ್ ಡಿಟೆಕ್ಷನ್ ಶ್ವಾನದ ಮೂಲಕವೂ ಪರಿಶೀಲನೆ ನಡೆಸಲಾಗಿದ್ದು, ಇದುವರೆಗೆ ಯಾವುದೇ ಸ್ಫೋಟಕ ವಸ್ತುವಿನ ಸುಳಿವು ಸಿಕ್ಕಿಲ್ಲ. ತಾಂತ್ರಿಕ ದೋಷ, ವಾಹನದ ಬಿಡಿಭಾಗಗಳ ದೋಷ ಅಥವಾ ಇತರ ಕಾರಣಗಳಿಂದ ಸ್ಫೋಟ ಸಂಭವಿಸಿರುವ ಸಾಧ್ಯತೆಯೂ ಪರಿಶೀಲನೆಯಲ್ಲಿದೆ ಎಂದು ಎಸ್‍ಪಿ ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೈಕ್‍ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು, ಕಾರಿನ ಮಾಲೀಕ ಹಾಗೂ ಸಾರ್ವಜನಿಕರು ಸುರಕ್ಷಿತರಾಗಿದ್ದಾರೆ. ಕೆಲ ಆಸ್ತಿಪಾಸ್ತಿಗಳಿಗೆ ಸಣ್ಣ ಪ್ರಮಾಣದ ಹಾನಿಯಾಗಿದ್ದು, ಅದರ ಬಗ್ಗೆಯೂ ಪರಿಶೀಲನೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.