ತಾಳಿಕೋಟೆ:ಜೂ.13: ನಾಟ್ಯ ಸ್ಪೂರ್ತಿ ಆರ್ಟ & ಕಲ್ಚರಲ್ ಅಕಾಡೆಮಿ (ರಿ) ಧಾರವಾಡ ಇದರ 15ನೇ ವಾರ್ಷಿಕೋತ್ಸವದ ಅಂಗವಾಗಿ ಕೊಡಮಾಡಲಾಗುವ ರಾಜ್ಯಮಟ್ಟದ ಬಸವಶ್ರೀ ಪ್ರಶಸ್ತಿಗೆ ತಾಳಿಕೋಟೆಯ ಶ್ರೀ ಸಂಗಮೇಶ್ವರ ಪ್ರೌಢ ಶಾಲೆಯ ಹಿಂದಿ ಶಿಕ್ಷಕ ಬಿ.ಆಯ್.ಹಿರೇಹೊಳಿ ಅವರು ಆಯ್ಕೆಯಾಗಿದ್ದಾರೆ.
ಶಿಕ್ಷಕ ಬಿ.ಆಯ್.ಹಿರೇಹೊಳಿ ಅವರು ಶಿಕ್ಷಣ ಕ್ಷೇತ್ರದಲ್ಲಿಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಇದೇ ದಿ. 15 ರಂದು ದಾರವಾಡದ ಆಲೂರ ವೆಂಕಟರಾವ್ ಭವನದಲ್ಲಿ ನಡೆಯಲಿರುವ ವಾರ್ಷಿಕೋತ್ಸವ ಸಮಾರಂಭದಲ್ಲಿ ರಾಜ್ಯಮಟ್ಟದ ಬಸವಶ್ರೀ ಪ್ರಶಸ್ತಿ ಪ್ರಧಾನವಾಗಲಿದೆ.
ಶಿಕ್ಷಕ ಬಿ.ಆಯ್.ಹಿರೇಹೊಳಿ ಅವರಿಗೆ ರಾಜ್ಯ ಮಟ್ಟದ ಬಸವಶ್ರೀ ಪ್ರಶಸ್ತಿ ಲಬಿಸಿದ್ದಕ್ಕೆ ಎಸ್.ಎಸ್.ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಪಾಟೀಲ,
ಕಾರ್ಯದರ್ಶಿ ಸಚಿನ.ಎಚ್.ಪಾಟೀಲ, ಆಡಳಿತಾಧಿಕಾರಿ ಕಿರಣ.ಎಚ್.ಪಾಟೀಲ, ರವಿ.ಬಿ.ಪಾಟೀಲ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ.ಕಟ್ಟಿ, ಜೆ.ಎಮ್.ಕೊಣ್ಣುರ, ಒಳಗೊಂಡು ಸಂಸ್ಥೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.