
ಮಾಲೂರು, ಸೆ. ೧೮: ತಾಲ್ಲೂಕಿನ ಲಕ್ಕೂರು ಹೋಬಳಿ ಮಟ್ಟದ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆ ಗಳಿಗೆ ಪರಿಹಾರ ನೀಡಲು ಶಾಸಕ ಕೆ.ವೈ. ನಂಜೇಗೌಡ ಅವರ ನೇತೃತ್ವದಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಇದೇ ೧೯ರ ಶನಿವಾರ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಹಶೀಲ್ದಾರ್ ಎಂ.ವಿ.ರೂಪ ತಿಳಿಸಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ರಾಜ್ಯ ಸರ್ಕಾರವು ನೂತನವಾಗಿ ಸ್ಥಾಪಿಸಿರುವ ಪ್ರಜಾಸೇವಾ ಇಲಾಖೆಯ ವತಿಯಿಂದ ಹೋಬಳಿವಾರು ಪ್ರಜಾಸೇವಾ ಅಭಿಯಾನ ಏರ್ಪಡಿಸಿ ಜನಸಾಮಾನ್ಯರಿಂದ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ನೀಡಲಾಗುತ್ತಿದೆ. ಈಗಾಗಲೇ ಮಾಸ್ತಿ, ಟೇಕಲ್ ಹೋಬಳಿಗಳಲ್ಲಿ ಪ್ರಜಾಸೇವಾ ಕಾರ್ಯಕ್ರಮ ನಡೆದಿದ್ದು ಇದೇ ೧೯ರ ಶನಿವಾರ ಬೆಳಗ್ಗೆ ಹತ್ತು ಮೂವತ್ತಕ್ಕೆ ಏರ್ಪಡಿಸಲಾಗಿದೆ. ಆದ್ದರಿಂದ ಪ್ರಜಾಸೇವಾ ಆಂದೋಲನ ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಕೋರಿದ್ದಾರೆ.




























