Home ಜಿಲ್ಲೆ ಹೋಬಳಿ ಮಟ್ಟದ ಕ್ರೀಡಾಕೂಟಎಸ್.ಎನ್.ಡಿ. ಶಾಲೆ ಕ್ರೀಡಾಪಟುಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಹೋಬಳಿ ಮಟ್ಟದ ಕ್ರೀಡಾಕೂಟಎಸ್.ಎನ್.ಡಿ. ಶಾಲೆ ಕ್ರೀಡಾಪಟುಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮುದ್ದೇಬಿಹಾಳ: ಸಮೀಪದ ಹುಲ್ಲೂರಿನ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದು, ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಕಬಡ್ಡಿ, ಉದ್ದಜಿಗಿತ, ಎತ್ತರ ಜಿಗಿತ, ೪೦೦ ಮೀಟರ್ ಓಟ ಹಾಗೂ ೬೦೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಉದ್ದಜಿಗಿತದಲ್ಲಿ ದ್ವಿತೀಯ ಸ್ಥಾನ, ರಿಲೇ ಓಟ ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದು ತಾಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಎಂ.ಎಸ್. ಕೊಪ್ಪ ಅವರು ಶುಭ ಹಾರೈಸಿ ಶಾಲಾ ಹಂತದಲ್ಲಿ ತಮ್ಮ ಪ್ರತಿಭೆ ಪರಿಶ್ರಮ ಹಾಗೂ ಶಿಸ್ತುಭದ್ದ ತರಬೇತಿಯ ಮೂಲಕ ಉತ್ತಮ ಪ್ರದರ್ಶನವನ್ನು ನೀಡಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಶಾಲೆಗೆ ಹೆಮ್ಮೆ ತಂದಿದ್ದಾರೆ ಕ್ರೀಡೆಯಲ್ಲಿ ಪಾಲ್ಗೊಳ್ಳುವದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಇದೇ ರೀತಿ ತಾಲೂಕು ಮಟ್ಟದಲ್ಲಿಯೂ ಸಹ ಉತ್ತಮ ಪ್ರದರ್ಶನವನ್ನು ನೀಡಿ ಶಾಲೆಗೆ ಹಾಗೂ ಊರಿಗೆ ಕೀರ್ತಿ ತರಲಿ ಎಂದು ಶುಭಹಾರೈಸಿದರು.
ಈ ಸಮಯದಲ್ಲಿ ಶಾಲೆಯ ಮುಖ್ಯಗುರುಗಳು, ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಕುಮಾರ ಹುಗಾರ ಸೇರಿದಂತೆ ಶಾಲಾ ಆಡಳಿತ ಮಂಡಳಿಯವರು ಹಾಗೂ ಪೋಷಕರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದರು.