
ಯಾದಗಿರಿ: ಕೃಷಿ ಕ್ಷೇತ್ರದಲ್ಲಿ ರೈತ ಮಹಿಳೆಯರು ಸಲ್ಲಿಸುತ್ತಿರುವ ಅಪಾರ ಸೇವೆ, ಪರಿಶ್ರಮ ಹಾಗೂ ಕೊಡುಗೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ನಮ್ಮ ಕರುನಾಡ ರಕ್ಷಣಾ ವೇದಿಕೆಯ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಗರದ ಶ್ರೀ ಮರಳು ಸಿದ್ದೇಶ್ವರ ಮಠದ ಪೂಜ್ಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ, ವೇದಿಕೆಯ ಜಿಲ್ಲಾಧ್ಯಕ್ಷ ರವಿ ಮುದ್ನಾಳ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ರಾಚನಗೌಡ ಮುದ್ನಾಳ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಚನಗೌಡ ಮುದ್ನಾಳ ಅವರು, ರೈತ ಮಹಿಳೆಯರು ಕೃಷಿ ಕ್ಷೇತ್ರದಲ್ಲಿ ಪುರುಷರಷ್ಟೇ ಶ್ರಮವಹಿಸಿ ಕುಟುಂಬ ಹಾಗೂ ಕೃಷಿಯ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅವರ ಪರಿಶ್ರಮ ಮತ್ತು ಸೇವೆಯನ್ನು ಸಮಾಜ ಗುರುತಿಸಿ ಗೌರವಿಸುವುದು ಅತ್ಯಂತ ಅಗತ್ಯವಾಗಿದೆ. ರೈತ ಮಹಿಳೆಯರನ್ನು ಸನ್ಮಾನಿಸುವ ಮೂಲಕ ಗೌರವ ಸಲ್ಲಿಸುತ್ತಿರುವ ನಮ್ಮ ಕರುನಾಡ ರಕ್ಷಣಾ ವೇದಿಕೆಯ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ರಾಚನಗೌಡ ಮುದ್ನಾಳ ಹಾಗೂ ಮಹೇಶರೆಡ್ಡಿಗೌಡ ಮುದ್ನಾಳ ಉದ್ಘಾಟಿಸಿದರು. ಪೂಜ್ಯರ ಸಾನ್ನಿಧ್ಯದಲ್ಲಿ ರೈತ ಮಹಿಳೆಯರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ ಜಿಲ್ಲಾಧ್ಯಕ್ಷ ರವಿ ಮುದ್ನಾಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಹೇಶ್ ಅವಂಟಿ, ಮನೋಜ್ ರಾಥೋಡ್, ಮಾಳಿಂಗರಾಯ ಕನಸುಗೂರು, ದಿಲೀಪ್ ಕುಮಾರ್ ದೋಖ, ವಿಜಯ ಭರತ್, ಭೀಮರಾಯ ತಾನಗುಂದಿ, ಕಾಸಿಂಸಾಬ್ ಗಡ್ಡೆ, ವೆಂಕಪ್ಪ ರಾಥೋಡ್, ಕಾಶಿನಾಥ್ ರಾಥೋಡ್, ಚಂದ್ರಕಲಾ ಗುತ್ತೇದಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲೀಲಾ ಚವಾಣ್, ತಾಲೂಕು ಅಧ್ಯಕ್ಷೆ ಸುನಿತಾ ಹೆಚ್.ಎಸ್., ಗುರುಮಠಕಲ್ ತಾಲೂಕು ಅಧ್ಯಕ್ಷ ಅಶೋಕರೆಡ್ಡಿ ವಂಕಸAಬ್ರ, ತಿಪ್ಪಯ್ಯ ವಂಕಸAಬ್ರ, ಭರತ್ ಮಾಧವಾರ್ ಸೇರಿದಂತೆ ವೇದಿಕೆಯ ಪದಾಧಿಕಾರಿಗಳು ಹಾಗೂ ವಿವಿಧ ಗ್ರಾಮ ಘಟಕಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




















