
ಜಮಖಂಡಿ | ಜು 18:ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕೋಡ ಕ್ರಾಸ್‍ನಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತ ಯುವಕನನ್ನು ಟಕ್ಕೋಡ ಗ್ರಾಮದ 25 ವರ್ಷದ ಅಪ್ಪಾಸಾಹೇಬ ಮಲ್ಲಪ್ಪ ಜಕಾತಿ ಎಂದು ಗುರುತಿಸಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸಾವಳಗಿ ಪೆÇಲೀಸ್ ಠಾಣೆಯ ಪಿಎಸ್‍ಐ ಅಪ್ಪಣ್ಣ ಐಗಳಿ ಹಾಗೂ ಪೆÇಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತಕ್ಕೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಪೆÇಲೀಸ್ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಈ ಸಂಬಂಧ ಸಾವಳಗಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.





























