Home ಕ್ರೈಂ ಸುದ್ದಿಗಳು ತೆಲಂಗಾಣದಲ್ಲಿ ಭೀಕರ ಅಪಘಾತ: ಬೀದರ್‍ನ ಒಂದೇ ಗ್ರಾಮದ 6 ಕೂಲಿ ಕಾರ್ಮಿಕರ ದುರ್ಮರಣ

ತೆಲಂಗಾಣದಲ್ಲಿ ಭೀಕರ ಅಪಘಾತ: ಬೀದರ್‍ನ ಒಂದೇ ಗ್ರಾಮದ 6 ಕೂಲಿ ಕಾರ್ಮಿಕರ ದುರ್ಮರಣ

ಬೀದರ್: ಕೂಲಿ ಕೆಲಸ ಮುಗಿಸಿಕೊಂಡು ಆಟೋದಲ್ಲಿ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆಯ 6 ಜನ ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.
ತೆಲಂಗಾಣದ ಗಡಿ ಭಾಗದಲ್ಲಿ ಆಟೋ ಹಾಗೂ ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರನ್ನು ಬೀದರ್ ತಾಲ್ಲೂಕಿನ ರಾಜಗೀರಾ ಗ್ರಾಮದ ದೇವಿದಾಸ ತಂದೆ ಮಾರುತಿ (35), ನಿಖಿತಾ ರಾಜು (42), ರೇಖಾ ಸಂಜೀವಕುಮಾರ (45), ರೇಷ್ಮಾ ಶೈಲೇಶ್ (38), ಶ್ರೀದೇವಿ ಮೊಗಲಪ್ಪ (40), ಜಗದೇವಿ ಅಲಿಯಾಸ್ ಕವಿತಾ ವಿಠ್ಠಲ (43) ಗುರುತಿಸಲಾಗಿದೆ. ಅಪಘಾತದಲ್ಲಿ ನಿರ್ಮಲಾ ನರಸಿಂಗ (45), ಕಾಳಮ್ಮ ಲಕ್ಷ್ಮಣ (48), ಶಿಲ್ಪಾ (35) ಶೋಭಾ ದೇವಿಂದ್ರ (35) , ಚಂದ್ರಕಲಾ ದೇವಿದಾಸ್ (35), ರಾಧಿಕಾರ ಸಾಗರ್ (27) ಎಂಬುವರು ಗಾಯಗೊಂಡಿದ್ದಾರೆ.

ಕೂಲಿ ಕೆಲಸಕ್ಕಾಗಿ ನೆರೆಯ ತೆಲಂಗಾಣಕ್ಕೆ ತೆರಳಿದ್ದ ಕಾರ್ಮಿಕರು ಕೆಲಸ ಮುಗಿಸಿಕೊಂಡು ಕತ್ತಲಾಗುತ್ತಿದ್ದಂತೆ ಆಟೋದಲ್ಲಿ ತಮ್ಮ ಸ್ವಗ್ರಾಮದತ್ತ ವಾಪಸಾಗುತ್ತಿದ್ದರು. ಈ ವೇಳೆ ಟ್ಯಾಂಕರ್ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಒಂದೇ ಗ್ರಾಮದ 6 ಜನ ಕಾರ್ಮಿಕರು ಸಾವು

ಮೃತರೆಲ್ಲರೂ ಬೀದರ್ ತಾಲೂಕಿನ ರಾಜಗೀರಾ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ದಿನಗೂಲಿ ಕೆಲಸವನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ ಈ ಕಾರ್ಮಿಕರು ಕೆಲಸಕ್ಕಾಗಿ ತೆಲಂಗಾಣಕ್ಕೆ ತೆರಳಿದ್ದರು.

ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಸಂಭವಿಸಿದ ದುರಂತದಿಂದ ಐದು ಕುಟುಂಬಗಳು ಆಘಾತಕ್ಕೊಳಗಾಗಿವೆ. ಒಂದೇ ಗ್ರಾಮದ 6 ಜನ ಕಾರ್ಮಿಕರು ಒಂದೇ ಅಪಘಾತದಲ್ಲಿ ಮೃತಪಟ್ಟಿರುವುದು ರಾಜಗೀರಾ ಗ್ರಾಮದಲ್ಲಿ ತೀವ್ರ ದುಃಖದ ವಾತಾವರಣಕ್ಕೆ ಕಾರಣವಾಗಿದೆ.

ಕುಟುಂಬಸ್ಥರ ಆಕ್ರಂದನ

ಮೃತರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಕೂಲಿ ಕೆಲಸ ಮಾಡಿ ಕುಟುಂಬ ನಿರ್ವಹಿಸುತ್ತಿದ್ದವರನ್ನು ಕಳೆದುಕೊಂಡಿರುವ ಕುಟುಂಬಗಳ ಸ್ಥಿತಿ ಕರುಣಾಜನಕವಾಗಿದೆ.

ಒಂದೇ ಗ್ರಾಮದ 6 ಜನ ಕಾರ್ಮಿಕರು ದುರಂತವಾಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಇಡೀ ರಾಜಗೀರಾ ಗ್ರಾಮವೇ ಶೋಕದಲ್ಲಿ ಮುಳುಗಿದೆ. ಅಪಘಾತದ ಕುರಿತು ಸ್ಥಳೀಯ ಪೆÇಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಘಟನೆಗೆ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಬಡ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ; ಈಶ್ವರ್ ಖಂಡ್ರೆ

ಬೀದರ್: ಮೃತಪಟ್ಟ ಬಡ ಕುಟುಂಬವೊಂದಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಆರ್ಥಿಕ ನೆರವು ಒದಗಿಸಲಾಗುವುದು ಹಾಗೂ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಬೀದರ್‍ನ ಬ್ರಿಮ್ಸ್ (ಃಖIಒS) ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ. ನೆರವು:

“ನಾನು ಇಲ್ಲಿಗೆ ಬರುವಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಇದೊಂದು ಬಡ ಕುಟುಂಬವಾಗಿದ್ದು, ಆ ಕುಟುಂಬಕ್ಕೆ ಸಾಂತ್ವನ ಹೇಳುವ ನಿಟ್ಟಿನಲ್ಲಿ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ಕೇಳಿಕೊಂಡಿದ್ದೆ. ಅದಕ್ಕೆ ಮುಖ್ಯಮಂತ್ರಿಗಳು ತಕ್ಷಣವೇ ಒಪ್ಪಿಗೆ ಸೂಚಿಸಿದ್ದಾರೆ. ಸರ್ಕಾರ ಹಾಗೂ ನಾವೆಲ್ಲರೂ ಆ ಬಡ ಕುಟುಂಬದ ಬೆಂಬಲಕ್ಕೆ ನಿಂತಿದ್ದೇವೆ” ಎಂದು ಸಚಿವರು ಅಭಯ ನೀಡಿದರು.