
ಜಮಖಂಡಿ:ತಾಲೂಕಿನ ಕುಂಬಾರಹಳ್ಳ ವ್ಯಾಪ್ತಿಯ ವಿಜಯಪುರ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಬಿದರಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಶ್ರೀಶೈಲ ಶಂಕರ ಅರಕೇರಿ ಎಂದು ಗುರುತಿಸಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯ ಪಿ.ಎಸ್.ಐ ಶಿವಾನಂದ ಮನ್ನಿಕೇರಿ, ಎ.ಎಸ್.ಐ ಕೆ.ಪಿ. ಸವದತ್ತಿ ಹಾಗೂ ಪೆÇಲೀಸ್ ಸಿಬ್ಬಂದಿಗಳಾದ ಬಿ.ಜಿ. ಜಂಬಗಿ, ಸಿದ್ದು ಸನ್ನಗೌಡರ ಮತ್ತು ಸಿದ್ದು ಹುದ್ದಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಗ್ರಾಮೀಣ ಪೆÇಲೀಸ್ ಠಾಣೆಯ ಪೆÇಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಪೆÇಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.





















