Home ಕ್ರೈಂ ಸುದ್ದಿಗಳು ಭೀಕರ ಅಪಘಾತ: ಮೂವರು ಮಹಿಳಾ ಕಾರ್ಮಿಕರ ಸಾವುಬೊಲೆರೋ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ; ಎಂಟು ಮಂದಿಗೆ...

ಭೀಕರ ಅಪಘಾತ: ಮೂವರು ಮಹಿಳಾ ಕಾರ್ಮಿಕರ ಸಾವುಬೊಲೆರೋ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ; ಎಂಟು ಮಂದಿಗೆ ಗಾಯ

ಶಹಾಪುರ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಳ್ಳಾಳ ಗ್ರಾಮದ ಸಮೀಪ ಭಾನುವಾರ ನಡೆದಿದೆ.

ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಗಮ್ಮ (18) ಎಂದು ಗುರುತಿಸಲಾಗಿದೆ.

ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಎಂಟು ಮಂದಿಯನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಕೈಗೊಂಡಿದ್ದಾರೆ.

ಘಟನೆಯಿಂದ ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖ ಮಡುಗಟ್ಟಿದೆ.