Home ಜಿಲ್ಲೆ ಕಲಬುರಗಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸಲು ‘ಹೊಸ ದಿಗಂತ’ ಕಾರ್ಯಕ್ರಮ

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸಲು ‘ಹೊಸ ದಿಗಂತ’ ಕಾರ್ಯಕ್ರಮ

ಕಲಬುರಗಿ: ಫರಹತಾಬಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ‘ಹೊಸ ದಿಗಂತ – ಪದವಿ ಶಿಕ್ಷಣಕ್ಕೆ ಆತ್ಮವಿಶ್ವಾಸದ ಆರಂಭ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ. ಶಿವಕುಮಾರ ಅವರು ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ತಮ್ಮಲ್ಲಿ ನಾಯಕತ್ವದ ಗುಣ, ಸ್ಪರ್ಧಾತ್ಮಕ ಮನೋಭಾವ, ಕ್ರಮಬದ್ಧ ಓದುವ ಅಭ್ಯಾಸ ಹಾಗೂ ಸಮಯಪಾಲನೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ತಮ್ಮ ಜೀವನದ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಲಬುರಗಿಯ ಸರ್ಕಾರಿ ಸ್ವಾಯತ್ತ ಕಾಲೇಜಿನ ಡಾ. ಪ್ರಕಾಶ ತಳವಾರ ಅವರು ಇಂಗ್ಲಿಷ್ ಭಾಷೆಯ ಮಹತ್ವ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹಾಗೂ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಅಗತ್ಯವಿರುವ ಕೌಶಲಗಳ ಕುರಿತು ಮಾತನಾಡಿದರು. ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುನ್ನಡೆದು ತಮ್ಮ ಸಾಮಥ್ರ್ಯವನ್ನು ಸಾಬೀತುಪಡಿಸಬೇಕು ಎಂದು ಹೇಳಿದರು.

ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ) ಸಂಯೋಜಕ ಡಾ. ಟಿ. ಅಡಿವೇಶ ಅವರು ವಿದ್ಯಾರ್ಥಿಗಳಿಗೆ ಮನರಂಜನೆಯೊಂದಿಗೆ ಪೆÇ್ರೀತ್ಸಾಹದಾಯಕ ಮಾತುಗಳನ್ನು ತಿಳಿಸಿ, ಉನ್ನತ ಶಿಕ್ಷಣದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಭೀಮಣ್ಣ ಎಚ್. ಅವರು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಕಾಲೇಜು ಕೈಗೊಳ್ಳುತ್ತಿರುವ ಸಿದ್ಧತೆಗಳು ಹಾಗೂ ವಿದ್ಯಾರ್ಥಿಗಳು ತಮ್ಮನ್ನು ತಾವು ಶೈಕ್ಷಣಿಕ ಮತ್ತು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಾದ ಅಗತ್ಯವನ್ನು ವಿವರಿಸಿದರು. ಕಾಲೇಜಿನಲ್ಲಿರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ಅವರು, ಜೀವನದಲ್ಲಿ ತಾಯಿ ಮತ್ತು ತಂದೆಯ ಪ್ರೀತಿ, ತ್ಯಾಗ ಹಾಗೂ ಮಾರ್ಗದರ್ಶನದ ಮೌಲ್ಯವನ್ನು ಅರಿತು ಮುನ್ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಡಾ. ಗೀತಾ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಡಾ. ಗೌರಮ್ಮ ಪಾಟೀಲ ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.