Home ಮುಖಪುಟ ಸುದ್ದಿ ಹೋಟೆಲ್‌ನಲ್ಲಿ ಬೆಂಕಿ: ೨೧ ಮಂದಿ ಸಾವು

ಹೋಟೆಲ್‌ನಲ್ಲಿ ಬೆಂಕಿ: ೨೧ ಮಂದಿ ಸಾವು

ನವದೆಹಲಿ,ಜೂ.೩- ರಾಷ್ಟರಾಜಧಾನಿ ದೆಹಲಿಯ ಮಾಳವೀಯ ನಗರ ಪ್ರದೇಶದ ಲೆಮನ್ ಗ್ರೀನ್ ರೆಸ್ಟೋರೆಂಟ್‌ನ ನೆಲಮಾಳಿಗೆಯಲ್ಲಿ ಸಂಭವಿಸಿದ ದೊಡ್ಡ ಬೆಂಕಿ ಅವಘಡದಲ್ಲಿ ಕನಿಷ್ಠ ೨೧ ಮಂದಿ ಸಾವನ್ಮಪ್ಪಿರುವ ದುರ್ಘಟನೆ ನಡೆದಿದೆ.

ಬೆಂಕಿ ಅವಘಡದಲ್ಲಿ ೧೧ ಮಂದಿಯನ್ನು ರಕ್ಷಿಸಿದ್ದು ಗಾಯಗೊಂಡ ಮೂರು ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ರೆಸ್ಟೋರೆಂಟ್‌ನ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಳಿಗ್ಗೆ ೯:೪೫ ರ ಸುಮಾರಿಗೆ ದೆಹಲಿ ಅಗ್ನಿಶಾಮಕ ದಳಕ್ಕೆ ಘಟನೆಯ ಬಗ್ಗೆ ಮಾಹಿತಿ ಬಂದಿತು,

ನಂತರ ಹಲವು ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಕಟ್ಟಡದಲ್ಲಿ ಹಲವಾರು ಜನರು ಸಿಲುಕಿಕೊಂಡಿರುವ ಶಂಕೆಯಿಂದಾಗಿ ಅಗ್ನಿಶಾಮಕ ದಳದವರು ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಆ ವೇಳೆಗೆ ೧೦ ಮಂದಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ನೆಲಮಾಳಿಗೆಯಲ್ಲಿ ಸಿಲುಕಿದ್ದ ಮೂವರು ವ್ಯಕ್ತಿಗಳನ್ನು ಸುರಕ್ಷಿತವಾಗಿ ಹೊರತೆಗೆದು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ಗಳ ಮೂಲಕ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.
ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.