
ಕಲಬುರಗಿ,ಸೆ.4-ಹಾಡು ಹಗಲೇ ಮನೆ ಬೀಗ ಮುರಿದು 90 ಸಾವಿರ ರೂ.ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಕಳವು ಮಾಡಿರುವ ಘಟನೆ ಫರಹತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಮಿಣಜಗಿ ಗ್ರಾಮದಲ್ಲಿ ನಡೆದಿದೆ.
ಮಡಿವಾಳಪ್ಪ ಮಾಲಿಪಾಟೀಲ ಎಂಬುವರ ಮನೆ ಬೀಗ ಮುರಿದು ಕಳ್ಳರು 70 ಸಾವಿರ ರೂ.ಮೌಲ್ಯದ 6 ಗ್ರಾಂ.ಬಂಗಾರದ ಮಂಗಳಸೂತ್ರ, 20 ಸಾವಿರ ರೂ.ಮೌಲ್ಯದ 5 ಜೊತೆ ಬೆಳ್ಳಿಯ ಕಾಲು ಚೈನಾ ಸೇರಿ 90 ಸಾವಿರ ರೂ.ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಕಳವು ಮಾಡಿದ್ದಾರೆ.
ಮಡಿವಾಳಪ್ಪ ಮಾಲಿಪಾಟೀಲ ಅವರು ಮನೆಗೆ ಬೀಗ ಹಾಕಿಕೊಂಡು ಹೊಲಕ್ಕೆ ಹೋಗಿದ್ದ ವೇಳೆ ಮನೆ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಫರಹತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.






























