Home ಜಿಲ್ಲೆ ಕಲಬುರಗಿ ರಾತ್ರಿ ವೇಳೆ ಮನೆ ಕಳ್ಳತನ: ಇಬ್ಬರ ಕಳ್ಳರ ಬಂಧನ18.46 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ

ರಾತ್ರಿ ವೇಳೆ ಮನೆ ಕಳ್ಳತನ: ಇಬ್ಬರ ಕಳ್ಳರ ಬಂಧನ18.46 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ

ಕಲಬುರಗಿ,ಏ.13-ಕಾಳಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 8 ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ 119 ಗ್ರಾಂ.ಬಂಗಾರದ ಒಡವೆ, 85 ಗ್ರಾಂ.ಬೆಳ್ಳಿ ಆಭರಣ, 28 ಸಾವಿರ ರೂ.ನಗದು ಸೇರಿ 18.46 ಲಕ್ಷ ರೂ.ಮೌಲ್ಯದ ಸ್ವತ್ತನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಎಸ್‍ಪಿ ಅಡ್ಡೂರು ಶ್ರೀನಿವಾಸಲು ತಿಳಿಸಿದರು.
ನಗರದ ಪೊಲೀಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ 8 ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ತಾಲ್ಲೂಕಿನ ಕೌಂಸರನಾಯಕ ತಾಂಡಾದ ಅಪ್ಪಾಜಿ ಗಂಗಾರಾಮ ಚವ್ಹಾಣ್ (22), ಹೊನ್ನಳ್ಳಿ ತಾಂಡಾದ ಮಿಥುನ್ ಲಕ್ಷ್ಮಣ ಚವ್ಹಾಣ್ (23) ಎಂಬುವವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಇವರು ರಾತ್ರಿ ವೇಳೆ ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು ಎಂದು ತಿಳಿಸಿದರು.
ಹೆಚ್ಚುವರಿ ಎಸ್‍ಪಿ ಮಹೇಶ ಮೇಘಣ್ಣನವರ್, ಶಹಾಬಾದ ಡಿಎಸ್‍ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಕಾಳಗಿ ಪಿಎಸ್‍ಐ ಹಾಗೂ ಸಿಬ್ಬಂದಿಯನ್ನು ಒಳಗೊಂಡ ತಂಡ ಈ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.