
ಕಲಬುರಗಿ,ಅ.3-ಮನೆ ಬೀಗ ಮುರಿದು 1.45 ಲಕ್ಷ ರೂ.ಮೌಲ್ಯದ ನಗನಾಣ್ಯ ಕಳವು ಮಾಡಿರುವ ಘಟನೆ ನಗರದ ಚಿಂಚೋಳಿ ಲೇಔಟ್‍ನಲ್ಲಿ ನಡೆದಿದೆ.
ಶರಣಬಸಪ್ಪಾ ಜಮಾದಾರ ಎಂಬುವವರ ಮನೆ ಬೀಗ ಮುರಿದು ಕಳ್ಳರು 1 ಲಕ್ಷ ರೂ.ಮೌಲ್ಯದ 10 ಗ್ರಾಂ.ಬಂಗಾರದ ಬೋರಮೊಳ, 30 ಸಾವಿರ ರೂ.ಮೌಲ್ಯದ 3 ಗ್ರಾಂ.ಬಂಗಾರದ ಸುತ್ತುಂಗುರ ಮತ್ತು 15 ಸಾವಿರ ರೂ.ನಗದು ಸೇರಿ 1.45 ಲಕ್ಷ ರೂ.ಮೌಲ್ಯದ ನಗನಾಣ್ಯ ಕಳವು ಮಾಡಿದ್ದಾರೆ.
ಶರಣಬಸಪ್ಪಾ ಅವರು ತಮ್ಮ ಸಹೋದರಿಯ ಆರೋಗ್ಯ ವಿಚಾರಿಸಿಕೊಂಡು ಬರಲೆಂದು ಮನೆಗೆ ಬೀಗ ಹಾಕಿಕೊಂಡು ಮುಂಬೈಗೆ ಹೋಗಿದ್ದ ವೇಳೆ ಮನೆ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.
ಆರ್.ಜಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.





















