Home ಜಿಲ್ಲೆ ಯಾದಗಿರಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಎಚ್‌ಪಿಎಲ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ

ಯಾದಗಿರಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಎಚ್‌ಪಿಎಲ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ

ಯಾದಗಿರಿ:ಜೂ.೧೫: ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಪ್ರಪ್ರಥಮ ಬಾರಿಗೆ ಆಯೋಜಿಸಲಾದ ಎಚ್‌ಪಿಎಲ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ಗೆ ಅಹಿಂದ ಸಂಘಟನೆಯ ಹಿರಿಯ ಮುಖಂಡ ಹನುಮೇಗೌಡ ಬೀರನಕಲ್ ಅವರು ಚಾಲನೆ ನೀಡಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಎಂ.ಐ.ಪಿ.ಎಲ್-ಜೆಡ್ ವತಿಯಿಂದ ಆಯೋಜಿಸಿದ್ದ ಟೂರ್ನಮೆಂಟ್ ಉದ್ಘಾಟಿಸಿ ಮಾತನಾಡಿದ ಅವರು, ಯಾದಗಿರಿ ಜಿಲ್ಲೆಯಲ್ಲಿ ಅಪಾರ ಸಂಖ್ಯೆಯ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಸೂಕ್ತ ಅವಕಾಶ ಹಾಗೂ ಪ್ರೋತ್ಸಾಹದ ಕೊರತೆಯಿಂದ ಹಲವರು ತಮ್ಮ ಪ್ರತಿಭೆಯನ್ನು ಹೊರಹಾಕಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
“ಜಿಲ್ಲೆಯ ಯುವ ಕ್ರೀಡಾಪಟುಗಳು ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಅಂತಹ ಪ್ರತಿಭೆಗಳಿಗೆ ಅಗತ್ಯ ಸಹಕಾರ ನೀಡಲು ನಾನು ಸದಾ ಬೆನ್ನೆಲುಬಾಗಿ ನಿಲ್ಲುತ್ತೇನೆ” ಎಂದು ಹನುಮೇಗೌಡ ಬೀರನಕಲ್ ಭರವಸೆ ನೀಡಿದರು.
ಇಂದಿನ ಡಿಜಿಟಲ್ ಯುಗದಲ್ಲಿ ಊPಐ ಕ್ರಿಕೆಟ್ ಟೂರ್ನಿಯಂತಹ ಕ್ರೀಡಾಕೂಟಗಳನ್ನು ಯೂಟ್ಯೂಬ್ ನೇರ ಪ್ರಸಾರದ ಮೂಲಕ ಜನರಿಗೆ ತಲುಪಿಸುವ ಪ್ರಯತ್ನ ಶ್ಲಾಘನೀಯವಾಗಿದೆ. ಇದರಿಂದ ಆಟಗಾರರಲ್ಲಿ ಆತ್ಮವಿಶ್ವಾಸ ಹೆಚ್ಚುವುದರ ಜೊತೆಗೆ ಅವರ ಪ್ರತಿಭೆ ಹೆಚ್ಚಿನ ಜನರಿಗೆ ಪರಿಚಯವಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಗಳು ದೊರೆತಾಗ ಅವರಲ್ಲಿರುವ ಸಾಮರ್ಥ್ಯ ಹೊರಬರುತ್ತದೆ. ಇಂತಹ ಡಿಜಿಟಲ್ ಮಾಧ್ಯಮದ ಮೂಲಕ ನಡೆಯುವ ಕ್ರೀಡಾ ಆಯೋಜನೆಗಳು ಹೆಚ್ಚಾಗಿ ಬೆಳೆದು ಜಿಲ್ಲೆಯ ಪ್ರತಿಭೆಗಳಿಗೆ ಹೊಸ ಅವಕಾಶಗಳನ್ನು ಕಲ್ಪಿಸಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಮಹೇಂದ್ರಗೌಡ ಅಳೋಳ್ಳಿ ಮಾತನಾಡಿ, ಕ್ರೀಡಾಪಟುಗಳು ಉತ್ತಮ ಆರೋಗ್ಯದ ಕಡೆ ಗಮನ ಹರಿಸಬೇಕು. ಆರೋಗ್ಯಕರ ಆಹಾರ ಪದ್ಧತಿ, ಹಣ್ಣು-ತರಕಾರಿ ಸೇವನೆ ಹಾಗೂ ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳುವ ಮೂಲಕ ಕ್ರೀಡೆಯಲ್ಲಿ ಯಶಸ್ಸು ಸಾಧಿಸಬಹುದು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ರಮೇಶ್ ಸುರಪುರ, ಹನುಮಂತರಾಯಗೌಡ ತೇಕರಾಳ, ವಿಕಾಸ್ ಶಿಂದೆ, ಹನುಮಂತ ಖಾನಳ್ಳಿ, ಅಂಬರೀಷ್ ಹತ್ತಿಮನಿ ಸೇರಿದಂತೆ ಹಲವು ಗಣ್ಯರು ಹಾಗೂ ಕ್ರೀಡಾಪಟುಗಳು ಭಾಗವಹಿಸಿದ್ದರು.
ಟೂರ್ನಿ ಆಯೋಜಕರಾದ ಜಾಕಿರ್ ಅತ್ತಾರ್, ಪ್ರೇಮ್ ಕುಮಾರ್, ಮಲ್ಲು ಆಶಾನಾಳ, ಇಮ್ರಾನ್ ಕಿಲ್ಲನಕೇರಾ ಹಾಗೂ ಜಿಲ್ಲಾ-ತಾಲೂಕು ಮಟ್ಟದ ಕ್ರೀಡಾಪಟುಗಳು ಉಪಸ್ಥಿತರಿದ್ದರು.ಕ್ಷಕ ತಮಜ್ ಹಾಗೂ ಶ್ರೀನಿವಾಸ್ ಚಾಮನಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.