
ಜಮಖಂಡಿ :ಏ.23:ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಗಂಡನಿಂದಲೇ ಪತ್ನಿಯನ್ನು ಹತ್ಯೆ ಮಾಡಿರುವ ದುರ್ಘಟನೆ ಬೆಳಕಿಗೆ ಬಂದಿದೆ.
ಮೃತಳನ್ನು ಸೌಮ್ಯ ಮಲ್ಲಪ್ಪ ತೋಟದ (32) ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ಮಲ್ಲಪ್ಪ ಸಿದ್ರಾಯ ತೋಟದ (30) ಎಂದು ತಿಳಿದುಬಂದಿದೆ. ಮದ್ಯದ ನಶೆಯಲ್ಲಿ ತಡರಾತ್ರಿ ಪತ್ನಿಯೊಂದಿಗೆ ಜಗಳವಾಡಿದ ಪತಿ, ಹಲ್ಲೆ ನಡೆಸಿದ್ದು, ಅದರ ಪರಿಣಾಮವಾಗಿ ಸೌಮ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೆÇಲೀಸರು ಪ್ರಾಥಮಿಕವಾಗಿ ತಿಳಿಸಿದ್ದಾರೆ.
ಇಬ್ಬರು ಪುಟ್ಟ ಮಕ್ಕಳ ತಾಯಿ ಸಾವನ್ನಪ್ಪಿರುವುದು ಹೃದಯವಿದ್ರಾವಕ ಘಟನೆ ಆಗಿದ್ದು, ತಾಯಿಯನ್ನು ಕಳೆದುಕೊಂಡ ಮಕ್ಕಳ ಅಳಲು ಗ್ರಾಮಸ್ಥರ ಮನಕಲಕುವಂತಿತ್ತು.
ಸುದ್ದಿ ತಿಳಿದ ತಕ್ಷಣ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆರೋಪಿಯನ್ನು ವಶಕ್ಕೆ ಪಡೆಯಲು ಪೆÇಲೀಸರು ಕ್ರಮ ಕೈಗೊಂಡಿದ್ದಾರೆ.






















