
ಕೆ.ಆರ್.ಪುರ, ಡಿ.೨- ನೀರು, ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದು ಶಾಸಕಿ ಮಂಜುಳಾ ಲಿಂಬಾವಳಿ ಅವರು ತಿಳಿಸಿದರು. ಮಹದೇವಪುರ ಕ್ಷೇತ್ರದ ನಲ್ಲೂರಹಳ್ಳಿ, ಅಂಬೇಡ್ಕರ್ ಗುಟ್ಟ, ವರ್ತೂರು, ಗುಂಜೂರು, ಚಿಕ್ಕಬೆಳ್ಳಂದೂರು, ಮುನ್ನೆ ಕೊಳ್ಳಾಲ ಮುಂತಾದ ಪ್ರದೇಶಗಳಲ್ಲಿ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಜನರಿಗೆ ಯಾವುದೇ ಸಮಸ್ಯೆ ಇದ್ದರೆ, ಅವರು ನನ್ನನ್ನು ನೇರವಾಗಿ ಸಂಪರ್ಕಿಸಬಹುದು. ಪ್ರತಿ ವಾರ್ಡ್ ಮುಖಂಡರು ಒಟ್ಟಾಗಿ ಜನರ ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಶ್ರೀಧರ್ ರೆಡ್ಡಿ,ಮಾಜಿ ಅಧ್ಯಕ್ಷ ರಾಜಾರೆಡ್ಡಿ, ನಗರಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಮೋದಿ,ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ವರ್ತೂರು ಶ್ರೀಧರ್,ವರ್ತೂರು ವಾರ್ಡನ ಕಾಮಗಾರಿ ಉಸ್ತುವಾರಿ ವಿ.ಪಿ.ರಕ್ಷೀತ್,ಮುಖಂಡರಾದ ಚಿಕ್ಕಣ್ಣ,ಸತ್ಯ, ಇತರರಿದ್ದರು.


































