Home ಜಿಲ್ಲೆ ಶುಕ್ರವಾರ ಆಲಮಟ್ಟಿಯಲ್ಲಿ ಐಸಿಸಿ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಧಾರ

ಶುಕ್ರವಾರ ಆಲಮಟ್ಟಿಯಲ್ಲಿ ಐಸಿಸಿ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಧಾರ

ತಾಳಿಕೋಟೆ: ವಿಜಯಪುರ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ಕೆರೆಗಳಿಗೆ ಆಲಮಟ್ಟಿ ಜಲಾಶಯದಿಂದ ನೀರು ಹರಿಸುವಂತೆ ತಾವು ಸಲ್ಲಿಸಿದ್ದ ಮನವಿಗೆ ಸರ್ಕಾರ ಸ್ಪಂದಿಸಿದ್ದು ಅ.೭ ರಿಂದ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಎಸ್. ನಾಡಗೌಡ(ಅಪ್ಪಾಜಿ) ಅವರು ತಿಳಿಸಿದ್ದಾರೆ.
ದೂರವಾಣಿ ಮೂಲಕ ಪತ್ರಿಕೆಗೆ ಮಾಹಿತಿ ನೀಡಿದ ಅವರು, ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ಹಲವು ಕೆರೆಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಚಿಮ್ಮಲಗಿ ಏತ ನೀರಾವರಿ ಯೋಜನೆ ಹಂತ-೩ರ ಕಾಲುವೆ ಜಾಲದ ಮೂಲಕ ಕೆರೆಗಳಿಗೆ ಅಗತ್ಯ ಪ್ರಮಾಣದ ನೀರು ಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾಗಿ ತಿಳಿಸಿದರು.
ಈ ಕುರಿತು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ಯಮಗಳು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಸಚಿವ ವಿಜಯಾನಂದ ಎಸ್. ಕಾಶಪ್ಪನವರ ಅವರಿಗೆ ಅ.೪ ರಂದು ಮನವಿ ಸಲ್ಲಿಸಲಾಗಿತ್ತು. ಅಲ್ಲದೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಗಮನಕ್ಕೂ ವಿಷಯವನ್ನು ತಂದು ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಲಾಗಿತ್ತು ಎಂದು ಹೇಳಿದರು.
ತಮ್ಮ ಮನವಿಗೆ ಸರ್ಕಾರ ಸ್ಪಂದಿಸಿ ಅ.೭ ರಿಂದ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಂಡಿರುವುದು ಸಂತಸ ತಂದಿದೆ. ಇದರಿಂದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ರೈತರು, ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಅನುಕೂಲವಾಗಲಿದೆ ಎಂದು ನಾಡಗೌಡ ಹೇಳಿದರು.

ಶುಕ್ರವಾರ ಆಲಮಟ್ಟಿಯಲ್ಲಿ ಐಸಿಸಿ ಸಭೆ
ರೈತರ ಅನುಕೂಲಕ್ಕಾಗಿ ನೀರು ಹರಿಸುವ ಕುರಿತು ಚರ್ಚಿಸಲು ಶುಕ್ರವಾರ ಆಲಮಟ್ಟಿಯ ಕೆಬಿಜೆಎನ್‌ಎಲ್ ಕಚೇರಿಯಲ್ಲಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ನಡೆಯಲಿದೆ.
ಸಭೆಯಲ್ಲಿ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ರೈತರ ಅಗತ್ಯತೆ ಹಾಗೂ ವಿವಿಧ ಪ್ರದೇಶಗಳಿಗೆ ಎಷ್ಟು ಪ್ರಮಾಣದಲ್ಲಿ ನೀರು ಹರಿಸಬೇಕು ಎಂಬುದರ ಕುರಿತು ವಿಸ್ತöÈತ ಚರ್ಚೆ ನಡೆಯಲಿದೆ.
ಈ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ, ಸಂಬAಧಪಟ್ಟ ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು ಹಾಗೂ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಅಗತ್ಯಕ್ಕೆ ಅನುಗುಣವಾಗಿ ನೀರು ಒದಗಿಸುವ ಕುರಿತು ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.
ಕೆರೆಗಳಿಗೆ ಹರಿಸಲಾಗುವ ನೀರನ್ನು ರೈತರು ಹಾಗೂ ಸಾರ್ವಜನಿಕರು ಸಮರ್ಪಕವಾಗಿ ಸಂಗ್ರಹಿಸಿಕೊAಡು ಸದುಪಯೋಗಪಡಿಸಿಕೊಳ್ಳಬೇಕು. ರೈತರ ಹಿತ ಕಾಪಾಡುವಲ್ಲಿ ತಾವು ಸದಾ ಮುಂಚೂಣಿಯಲ್ಲಿದ್ದು, ರೈತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಬದ್ಧರಾಗಿರುವುದಾಗಿ ಶಾಸಕ ಸಿ.ಎಸ್. ಅಪ್ಪಾಜಿ ನಾಡಗೌಡ ಅವರು ತಿಳಿಸಿದ್ದಾರೆ. ಅಲ್ಲದೇ ಕೆರೆಗಳಿಗೆ ನೀರು ಹರಿಸಲು ಸ್ಪಂದಿಸಿದ ಸರ್ಕಾರಕ್ಕೆ ಹಾಗೂ ಸಂಬAಧಪಟ್ಟ ಅಧಿಕಾರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.