ಸಮಸ್ಯೆ ಕಂಡು ಬಂದರೆ ಶೀಘ್ರ ಪರಿಹಾರ ಒದಗಿಸಿ : ಡಾ. ಶೈಲೇಂದ್ರ ಬೆಲ್ದಾಳೆ

ಬೀದರ:ಮೇ.೨೪:ಅಕಾಲಿಕ ಮಳೆಯಿಂದ ಕ್ಷೇತ್ರದಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾದರೆ ಅಧಿಕಾರಿಗಳು ಶೀಘ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳ ಅಹವಾಲು ಸ್ವೀಕರಿಸಿ ಕ್ರಮ ಕೈಗೊಳ್ಳಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಏಖೇಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಕಾಲಿಕ ಮಳೆಗೆ ನೀರು ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ಎರಡುಮೂರು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಏಖೇಳ್ಳಿ ಗ್ರಾಮದ ಮುಖ್ಯ ರಸ್ತೆಯ ತಗ್ಗು ಪ್ರದೇಶದಲ್ಲಿ ನೀರು ಸಂಗ್ರಹವಾಗಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸದ್ಯಕ್ಕೆ ತಾತ್ಕಾಲಿಕ ಪರಿಹಾರ ಒದಗಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಬರುವ ದಿನಗಳಲ್ಲಿ ಶಾಸ್ವತ ಪರಿಹಾರ ಕಲ್ಪಿಸಲು ಸಿದ್ಧತೆ ಮಾಡಿಕೊಂಡು ಅನುದಾನ ಕಲ್ಪಿಸಿ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಜಕುಮಾರ, ಸದಸ್ಯರಾದ ಸಂತೋಷ ಹಳ್ಳಿಖೇಡ, ಮುಖಂಡರಾದ ರಾಜಕುಮಾರ ಪಾಂಚಾಳ ಸಂಗ್ರಾಮ, ಲೋಕೋಪಯೋಗಿ ಇಲಾಖೆ ಅಧಿಕಾರಿ ವೀರೇಂದ್ರ ಶೆಟಕಾರ,
ಗ್ರಾಮಪಂಚಾಯಿತಿ ಪಿಡಿಒ ಭಾಗ್ಯಜ್ಯೋತಿ, ಬಿರಾದಾರ ಮತ್ತಿತರರು ಉಪಸ್ಥಿತರಿದ್ದರು.