Home ಜಿಲ್ಲೆ ಕಲಬುರಗಿ ನೀರಿನ ಸಮಸ್ಯೆ ಪತ್ರಿಕೆಗಳಲ್ಲಿ ಸುದ್ದಿ ಬಂದರೆ ಅಲ್ಲಿನ ಪಿಡಿಒ ಸಸ್ಪೆಂಡ್: ಸಚಿವ ಡಾ.ಶರಣಪ್ರಕಾಶ ಪಾಟೀಲ್ ಊಡಗಿ

ನೀರಿನ ಸಮಸ್ಯೆ ಪತ್ರಿಕೆಗಳಲ್ಲಿ ಸುದ್ದಿ ಬಂದರೆ ಅಲ್ಲಿನ ಪಿಡಿಒ ಸಸ್ಪೆಂಡ್: ಸಚಿವ ಡಾ.ಶರಣಪ್ರಕಾಶ ಪಾಟೀಲ್ ಊಡಗಿ

ಸೇಡಂ, ಏ,09: ಸೇಡಂ ಹಾಗೂ ಸೇಡಂ ಮತಕ್ಷೇತ್ರ ಚಿಂಚೋಳಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳಲ್ಲಿ ನೀರಿನ ಸಮಸ್ಯೆಗಳು ಪತ್ರಿಕೆಗಳಲ್ಲಿ ಸುದ್ದಿ ಬಂದರೆ ಅಲ್ಲಿನ ಪಿಡಿಒಗಳು ಸಸ್ಪೆಂಡ್ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ಊಡಗಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಆಡಳಿತಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಇಲ್ಲಿನ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಸೇಡಂ ಹಾಗೂ ಸೇಡಂ ಮತಕ್ಷೇತ್ರ ಚಿಂಚೋಳಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಹಾಗೂ ಪರಿಹಾರಕ್ಕಾಗಿ ನಡೆದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಪಂ ಆಡಳಿತಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನ ಆಡಕಿಯಲ್ಲಿ ನೀರಿನ ಸಮಸ್ಯೆ ಇರುವುದರಿಂದ ಹೊಸಾ ಬೊರವೇಲ್ ಕೊರಸುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು,ಬಟಗೇರ,ಬೆನಕನಹಳ್ಳಿ,ಮುಧೋಳ್, ಪಾಕಲ,ಸಕಲೇಶಪುರ, ಚಂದಪೂರ, ದುಗನೂರ, ದೇವನೂರು, ಕುರುಕುಂಟಾ,ಮದಕಲ,ಹಂದರಕಿ, ನೀಲಹಳ್ಳಿ ಕೋನಪೂರ, ಕೋಡ್ಲಾ, ಹಾಗೂ ಕುಕ್ಕುಂದಾ ಗ್ರಾಪಂನ ವ್ಯಾಪ್ತಿಯಲ್ಲಿನ ಎಸಿ ಏರಿಯಾಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಸಚಿವರಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದರು.ತಹಸಿಲ್ದಾರ್ ಶ್ರೀಮತಿ ಶ್ರೀಯಾಂಕಾ ಎ ಧನಶ್ರೀ ಕೆಎಎಸ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚನ್ನಪ್ಪ ರಾಯಣ್ಣನವರ, ಚಿಂಚೋಳಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುಬ್ಬಣ್ಣ ಜಮಖಂಡಿ ಇದ್ದರು. ಈ ವೇಳೆಯಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತ್ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.