
ಕಲಬುರಗಿ,ನ.13 ಜಿಲ್ಲೆಯ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಆಹಾರ ಮತ್ತು ಇತರೆ ಸಾಮಗ್ರಿಗಳನ್ನು ಸರಬರಾಜು ಮಾಡುವ ಟೆಂಡರ್ ಸಂಬಂಧಿಸಿದಂತೆ,ಟೆಂಡರ್ ಷರತ್ತುಗಳ ಉಲ್ಲಂಘನೆಯಾಗಿದೆ.
ಈ ಅಕ್ರಮ ವ್ಯವಹಾರದ ಕುರಿತು ಕ್ರಮ ಜರುಗಿಸದೇ ಅಧಿಕಾರದ ದುರುಪಯೋಗ ಮಾಡಿಕೊಂಡಿರುವ ಕಲಬುರಗಿ ಉಪ ನಿರ್ದೇಶಕರು ಆಹಾರ ಸರಬರಾಜು ಗುತ್ತಿಗೆದಾರರ ಜೊತೆಗೆ ಶಾಮೀಲಾಗಿ ಅವ್ಯವಹಾರ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಯನ್ನು ಅಮಾನತ್ತುಗೊಳಿಸಿ ಗುತ್ತಿಗೆದಾರರ ಪರವಾನಿಗೆಯನ್ನು ರದ್ದುಪಡಿಸಬೇಕೆಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ ಎಸ್ ಪಾಟೀಲ ನರಿಬೋಳ ಮತ್ತು ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಶ್ರವಣಕುಮಾರ ಡಿ ನಾಯಕ ಅವರು ಜಿಪಂ ಸಿಇಒ ಭಂವರಸಿಂಗ್ ಮೀನಾ ಅವರಿಗೆ ಮನವಿ ಸಲ್ಲಿಸಿದರು.

























