Home ಕ್ರೈಂ ಸುದ್ದಿಗಳು ಅಕ್ರಮ ಗ್ಯಾಸ್ ಸಿಲಿಂಡರ್ ಸಂಗ್ರಹ ಪ್ರಕರಣ: ಇಬ್ಬರ ಬಂಧನ, 6.24 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಅಕ್ರಮ ಗ್ಯಾಸ್ ಸಿಲಿಂಡರ್ ಸಂಗ್ರಹ ಪ್ರಕರಣ: ಇಬ್ಬರ ಬಂಧನ, 6.24 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಬೀದರ್: ಮೇ.29:ತಾಲೂಕಿನ ಜನವಾಡಾ ಪೆÇಲೀಸ್ ಠಾಣೆ ವ್ಯಾಪ್ತಿಯ ಮರಕಲ್ ಗ್ರಾಮದ ಗಣೇಶ ದೇವಸ್ಥಾನದ ಸಮೀಪ ಅಕ್ರಮವಾಗಿ ಹೆಚ್.ಪಿ ಗ್ಯಾಸ್ ಸಿಲಿಂಡರ್‍ಗಳನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪೆÇಲೀಸರು ಭೇದಿಸಿದ್ದು, ಇಬ್ಬರು ಆರೋಪಿತರನ್ನು ಬಂಧಿಸಿ ?6,24,990 ಮೌಲ್ಯದ ಸಿಲೆಂಡರ್ ಗಳನ್ನು ಜಪ್ತಿ ಮಾಡಿದ್ದಾರೆ.
ಈ ಕುರಿತು ಜನವಾಡಾ ಪೆÇಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 64/2026ರಡಿ ಇ.ಸಿ. ಕಾಯ್ದೆ ಹಾಗೂ ಎಲ್‍ಪಿಜಿ ಕಂಟ್ರೋಲ್ ಆರ್ಡರ್ 2000ರ ಕಲಂ 6 ಮತ್ತು 7ರ ಅನ್ವಯ ಪ್ರಕರಣ ದಾಖಲಾಗಿದೆ.
ದಿನಾಂಕ 27-05-2026ರಂದು ಜನವಾಡಾ ಪೆÇಲೀಸ್ ಠಾಣೆಯ ಪಿಎಸ್‍ಐ ಬಾಷುಮಿಯ್ಯಾ ಅವರಿಗೆ ಮರಕಲ್ ಗ್ರಾಮದ ಬಳಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್‍ಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿ ಆಧರಿಸಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹೆಚ್ಚುವರಿ ಪೆÇಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ ಹಾಗೂ ಡಿಎಸ್‍ಪಿ ದೂದ್ ಪೀರ್ ಹುಸೇನಸಾಬ್ ಮುಲ್ಲಾ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು.
ಸಿ.ಪಿ.ಐ ಜಿ.ಎಸ್. ಬಿರಾದರ್ ನೇತೃತ್ವದಲ್ಲಿ ಆಹಾರ ನಿರೀಕ್ಷಕ ಶ್ರೀನಿವಾಸ್ ಹಾಗೂ ಪೆÇಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಹೆಚ್.ಪಿ ಗ್ಯಾಸ್ ಸಿಲಿಂಡರ್‍ಗಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಯಿತು.
ಸ್ಥಳದಲ್ಲಿದ್ದ ಎರಡು ಗೂಡ್ಸ್ ಆಟೋಗಳ ಚಾಲಕರನ್ನು ವಿಚಾರಿಸಿದಾಗ, ಸಿಲಿಂಡರ್‍ಗಳ ವಿತರಣೆಗೆ ಯಾವುದೇ ದಾಖಲಾತಿಗಳು ಇಲ್ಲದೇ, ಬೀದರನ ಸುಜಾತಾ ಗ್ಯಾಸ್ ಏಜೆನ್ಸಿಯವರು ಕಾಳ ಸಂತೆಯಲ್ಲಿ ಮಾರಾಟ ಮಾಡಲು ನೀಡಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಪೆÇಲೀಸರು ದಾಳಿ ವೇಳೆ 14 ಕೆ.ಜಿ ತೂಕದ 41 ಖಾಲಿ ಹಾಗೂ 07 ತುಂಬಿದ ಹೆಚ್.ಪಿ ಗ್ಯಾಸ್ ಸಿಲಿಂಡರ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಿದ ಸಿಲಿಂಡರ್‍ಗಳ ಮೌಲ್ಯ ?1,12,495 ಆಗಿದ್ದು, ಕೃತ್ಯಕ್ಕೆ ಬಳಸಿದ ಎರಡು ಗೂಡ್ಸ್ ಆಟೋಗಳ ಮೌಲ್ಯ ?5,12,495 ಎಂದು ಅಂದಾಜಿಸಲಾಗಿದೆ.
ಪ್ರಕರಣ ಸಂಬಂಧ ಇಬ್ಬರು ಆರೋಪಿತರನ್ನು ಬಂಧಿಸಲಾಗಿದ್ದು, ಸುಜಾತಾ ಗ್ಯಾಸ್ ಏಜೆನ್ಸಿಯ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಈ ಯಶಸ್ವಿ ಕಾರ್ಯಾಚರಣೆ ನಡೆಸಿದ ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ.